'ಕೊರೊನಾ ವೈರಸ್' ದಾಳಿ: ಕೇರಳದಲ್ಲಿ ಎರಡನೇ ಪ್ರಕರಣ ಪತ್ತೆ
ಭಾರತದ ಕೇರಳ ರಾಜ್ಯದಲ್ಲಿ ಚೀನಾ ಮೂಲದ ಕೊರೊನಾ ವೈರಸ್ ಸೋಂಕು ಪತ್ತೆಯಾದ ಎರಡು ದಿನಗಳ ನಂತರ ಮತ್ತೆ ಅದೇ ರಾಜ್ಯದಲ್ಲಿ ಎರಡನೇ ಸೋಂಕು ಪ್ರಕರಣ ಪತ್ತೆಯಾಗಿದೆ.

ತಿರುವನಂತಪುರ: ಭಾರತದ ಕೇರಳ ರಾಜ್ಯದಲ್ಲಿ ಚೀನಾ ಮೂಲದ ಕೊರೊನಾ ವೈರಸ್ ಸೋಂಕು ಪತ್ತೆಯಾದ ಎರಡು ದಿನಗಳ ನಂತರ ಮತ್ತೆ ಅದೇ ರಾಜ್ಯದಲ್ಲಿ ಎರಡನೇ ಸೋಂಕು ಪ್ರಕರಣ ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಹೇಳಿಕೆ ಪ್ರಕಾರ, ಪತ್ತೆಯಾದ ಎರಡನೇ ವ್ಯಕ್ತಿ ಚೀನಾಕ್ಕೆ ಪ್ರಯಾಣಿಸಿದ ವರದಿಯಿದೆ. ಯಾವ ರೋಗಿಗೆ ಯಾವ ಆಸ್ಪತ್ರೆಯಲ್ಲಿ ಎಂದು ಇನ್ನಷ್ಟೆ ಆರೋಗ್ಯ ಇಲಾಖೆ ಬಹಿರಂಗಪಡಿಸಬೇಕಿದೆ. ಸದ್ಯ ರೋಗಿಯನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಕೇರಳ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಕೊಲ್ಲಂ ಜಿಲ್ಲೆಯ ನೀಂದಕರ ತಾಲ್ಲೂಕು ಆಸ್ಪತ್ರೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೆಚ್ಚಿನ ವಿವರ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಕೊರೊನಾ ವೈರಸ್ ಸೋಂಕು ಪ್ರಕರಣ ಕೇರಳದ ತ್ರಿಶೂರ್ ನಲ್ಲಿ ವರದಿಯಾಗಿತ್ತು.
ಕೇರಳ ರಾಜ್ಯದಲ್ಲಿ ಸದ್ಯ ಕೊರೊನಾ ಪೀಡಿತ ದೇಶಗಳಿಂದ ಬಂದ 1,793 ಮಂದಿಯನ್ನು ಕಣ್ಗಾವಲಿನಲ್ಲಿ ಇರಿಸಿದ್ದು ಅವರಲ್ಲಿ 1,723 ಮಂದಿಯನ್ನು ಪ್ರತ್ಯೇಕ ಕೊಠಡಿಗಳಲ್ಲಿ ಮತ್ತು 70 ಮಂದಿಯನ್ನು ಆಯ್ದ ಪ್ರತ್ಯೇಕ ವ್ಯವಸ್ಥಾ ಕೇಂದ್ರಗಳಲ್ಲಿ ಇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


