ಶ್ರೀನಗರದಲ್ಲಿ ಗ್ರೆನೇಡ್ ದಾಳಿ: ಸಿಆರ್‌ಪಿಎಫ್ ನ ಇಬ್ಬರು ಯೋಧರು, ನಾಲ್ವರು ನಾಗರಿಕರಿಗೆ ಗಾಯ
ಭಾನುವಾರ ಇಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ( (ಸಿಆರ್ ಪಿಎಫ್) ಸಿಬ್ಬಂದಿ ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ.

ಶ್ರೀನಗರ: ಭಾನುವಾರ ಇಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ( (ಸಿಆರ್ ಪಿಎಫ್) ಸಿಬ್ಬಂದಿ ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ.
ನಗರದ ಹೃದಯಭಾಗದಲ್ಲಿರುವ ಪ್ರೆಸ್ ಎನ್;ಕ್ಲೇವ್ ಎದುರಿನ ಪಾರ್ತಾಬ್ ಪಾರ್ಕ್ ಒಳಗೆ ನಿಯೋಜಿಸಲಾಗಿದ್ದ ಸಿಆರ್ ಪಿಎಫ್ ಯೋಧರ ಮೇಲೆ ಅಪರಿಚಿತ ಉಗ್ರರು ಗ್ರೆನೇಡ್ ಎಸೆದಿದ್ದಾರೆ ಎಂದು ಅಧಿಕೃತ ಮೂಲಗಳು ಯುಎನ್ ಐಗೆ ತಿಳಿಸಿವೆ.
ಗಾಯಗೊಂಡು ಸಿಆರ್ ಪಿಎಫ್ ಯೋಧರನ್ನು ಸಿ ತುಕಡಿಯ 171 ಬೆಟಾಲಿಯನ್ ನ ರವಿ ಬಿಸ್ವಾಸ್ ಮತ್ತು ಎಸ್ ಕೆ ಪಟ್ನಾಯಕ್ ಎಂದು ಗುರುತಿಸಲಾಗಿದ್ದು, ಸ್ಫೋಟದಲ್ಲಿ ನಾಲ್ವರು ನಾಗರಿಕರು ಸಹ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟ ಸಂಭವಿಸುತ್ತಿದ್ದಂತೆ ತಪ್ಪಿಸಿಕೊಳ್ಳುವಲ್ಲಿ ಉಗ್ರರು ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಲಾಗಿದೆ. ದಾಳಿಕೋರರನ್ನು ಬಂಧಿಸಲು ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಸ್ಫೋಟ ನಡೆದ ಸ್ಥಳದ 5 ಕಿ.ಮೀ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದೆ. ಭದ್ರತಾ ಪಡೆಗಳು ವಾಹನಗಳನ್ನು ವಿಶೇಷವಾಗಿ ದ್ವಿಚಕ್ರ ವಾಹನಗಳನ್ನು ವ್ಯಾಪಕವಾಗಿ ತಪಾಸಣೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


