'ಬಿಜೆಪಿಗೆ ಪಾಕಿಸ್ತಾನ ಮೇಲೆ ಪ್ರೇಮಾಂಕುರವಾಗಿದೆ, ಪಾಕಿಸ್ತಾನಿಗೆ ಪದ್ಮಶ್ರೀ ನೀಡಿದೆ'
ಪಾಕಿಸ್ತಾನ ಮೂಲದ ಗಾಯಕ ಅದ್ನಾನ್ ಸಮಿಗೆ ಪದ್ಮಶ್ರೀ ಪ್ರಶಸ್ತಿ ನೀಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಟಿ ಸ್ವರ ಭಾಸ್ಕರ್ ಕಟುವಾಗಿ ಟೀಕಿಸಿದ್ದು, ಬಿಜೆಪಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಎಂದು ಹೇಳಿದ್ದಾರೆ.

ಇಂಧೋರ್: ಪಾಕಿಸ್ತಾನ ಮೂಲದ ಗಾಯಕ ಅದ್ನಾನ್ ಸಮಿಗೆ ಪದ್ಮಶ್ರೀ ಪ್ರಶಸ್ತಿ ನೀಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಟಿ ಸ್ವರ ಭಾಸ್ಕರ್ ಕಟುವಾಗಿ ಟೀಕಿಸಿದ್ದು, ಬಿಜೆಪಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಇಂಧೋರ್‌ನಲ್ಲಿ "ಸಂವಿಧಾನ ರಕ್ಷಿಸಿ, ದೇಶ ರಕ್ಷಿಸಿ" ರ್ಯಾಲಿಯಲ್ಲಿ ಮಾತನಾಡಿದ ಅವರು, ಹೊಸ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಆಂಗೀಕರಿಸಿರುವುದು ದೇಶದ ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಟೀಕಿಸಿದರು.
"ವಲಸಿಗರಿಗೆ ಪೌರತ್ವ ನೀಡುವ ಮತ್ತು ನುಸುಳುಕೋರರನ್ನು ಬಂಧಿಸುವ ಕಾನೂನು ಪ್ರಕ್ರಿಯೆ ಈಗಾಗಲೇ ಭಾರತದಲ್ಲಿ ಚಾಲ್ತಿಯಲ್ಲಿದೆ. ನೀವು (ಸರ್ಕಾರ) ಅದ್ನನ್ ಸಮಿಗೆ ಭಾರತದ ಪೌರತ್ವ ನೀಡಿದ್ದೀರಿ ಹಾಗೂ ಪದ್ಮಶ್ರೀ ಗೌರವವನ್ನೂ ನೀಡಿದ್ದೀರಿ. ಹಾಗಿದ್ದ ಮೇಲೆ ಪೌರತ್ವ ತಿದ್ದುಪಡಿ ಕಾಯ್ದೆ ಸಮರ್ಥಿಸಿಕೊಳ್ಳುವ ಅಗತ್ಯವೇನು ?" ಎಂದು ಪ್ರಶ್ನಿಸಿದರು.
ಪಾಕಿಸ್ತಾನದ ವಾಯುಪಡೆ ಯೋಧರೊಬ್ಬರ ಮಗನಾಗಿ ಲಂಡನ್‌ನಲ್ಲಿ ಜನಿಸಿದ ಸಮಿ, 2015ರಲ್ಲಿ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರು. 2016ರ ಜನವರಿಯಲ್ಲಿ ಭಾರತದ ಪ್ರಜೆಯಾಗಿದ್ದರು. ಕಳೆದ ತಿಂಗಳು ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ 118 ಮಂದಿಯ ಪೈಕಿ ಇವರ ಹೆಸರೂ ಸೇರಿತ್ತು.
ಒಂದು ಕಡೆ ಸಿಎಎ ವಿರುದ್ಧ ಪ್ರತಿಭಟಿಸುವವರನ್ನು ನಿಂದಿಸುತ್ತಾರೆ, ದಂಡ ವಿಧಿಸುತ್ತಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


