ಗಾಂಧಿ ವಿರುದ್ಧ ಅನಂತ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಶೋಕಾಸ್ ನೋಟಿಸ್ ನೀಡಿದ ಬಿಜೆಪಿ
ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಅನಂತ ಕುಮಾರ್ ಹೆಗ್ಡೆ ಅವರಿಗೆ ಬಿಜೆಪಿ ಹೈಕಮಾಂಡ್ ಶೋ ಕಾಸ್ ನೋಟಿಸ್ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಅನಂತ ಕುಮಾರ್ ಹೆಗ್ಡೆ ಅವರಿಗೆ ಬಿಜೆಪಿ ಹೈಕಮಾಂಡ್ ಶೋ ಕಾಸ್ ನೋಟಿಸ್ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆಯ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಶೋಕಾಸ್ ನೋಟಿಸ್ ನೀಡಿದ್ದು, ಹೆಗ್ಡೆ ಅವರಿಂದ ವಿವರಣೆ ಬಯಸಿದ್ದಾರೆ ಎಂದು ಕಟೀಲ್ ಸುದ್ದಿಸಂಸ್ಥೆಯೊಂದಕ್ಕೆ ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟ, ಅಹಿಂಸಾ ಚಳವಳಿ ಹಾಗೂ ಮಹಾತ್ಮ ಗಾಂಧಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇತಿಹಾಸದ ಪ್ರಕಾರ ಉಪವಾಸಕ್ಕೆ ಹೆದರಿ ಬ್ರಿಟಿಷರು ದೇಶ ಬಿಟ್ಟು ಹೋದರು, ಇದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಲಾಠಿ ನೋಡದ, ಏಟು ತಿನ್ನದವರನ್ನು ಹಾಗೂ ಬ್ರಿಟಿಷರ ಜೊತೆಗೆ ಒಳಒಪ್ಪಂದ ಮಾಡಿಕೊಂಡವರನ್ನು ಇತಿಹಾಸದ ಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು.
ಮಂಗಳವಾರ ನಡೆಯಲಿರುವ ಸಂಸದೀಯ ಮಂಡಳಿ ಸಭೆಗೆ ಬರಬಾರದು ಎಂದು ಸೂಚಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


