ಮಹಾತ್ಮ ಗಾಂಧಿ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಪ್ರಧಾನಿ ಸ್ಪಷ್ಟನೆಗೆ ಕಾಂಗ್ರೆಸ್ ಆಗ್ರಹ
ರಾಷ್ಟ್ರಪಿತ ಮಹಾತ್ಮ ಗಾಂಧಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಬಿಜೆಪಿ ನಾಯಕ ಅನಂತ್ ಕುಮಾರ್ ಹೆಗ್ಡೆ ಅಪಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸ್ಪಷ್ಟನೆ ನೀಡುವಂತೆ ಪ್ರಧಾನಿ ನರೆಂದ್ರ ಮೋದಿ ಅವರನ್ನು ಆಗ್ರಹಿಸಿದೆ.

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಬಿಜೆಪಿ ನಾಯಕ ಅನಂತ್ ಕುಮಾರ್ ಹೆಗ್ಡೆ ಅಪಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸ್ಪಷ್ಟನೆ ನೀಡುವಂತೆ ಪ್ರಧಾನಿ ನರೆಂದ್ರ ಮೋದಿ ಅವರನ್ನು ಆಗ್ರಹಿಸಿದೆ.
ಈ ಸಂಬಂಧ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಐಸಿಸಿ ಹಿರಿಯ ವಕ್ತಾರ ಆನಂದ್ ಶರ್ಮಾ, ’’ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಬಿಜೆಪಿ ನಾಯಕರು ಇತ್ತೀಚೆಗೆ ನೀಡಿದ ಹೇಳಿಕೆಯ ಬಗ್ಗೆ ನಮಗೆ ಕಳವಳವಿದೆ. ಮಹಾತ್ಮ ಗಾಂಧಿಯವರ 150 ನೇ ವಾರ್ಷಿಕೋತ್ಸವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಗಂಭೀರವಾಗಿದ್ದರೆ, ಅವರು ಸಂಸತ್ತಿಗೆ ಬಂದು ಅನಂತ್‌ಕುಮಾರ್ ಹೆಗ್ಡೆ ಹೇಳಿಕೆ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.
ದೆಹಲಿ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ನಾಯಕರು ಸಲ್ಲದ ಹೇಳಿಕೆ ನೀಡುತ್ತಿದ್ದು, ರಾಷ್ಟ್ರದ ಆತ್ಮವನ್ನು ಘಾಸಿಗೊಳಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
"ಈ ಹಿಂದೆ ದೆಹಲಿ ಚುನಾವಣೆಯಲ್ಲಿ 3 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿರುವ ಬಿಜೆಪಿ ಹತಾಶಗೊಂಡಿದ್ದು, ಈ ಬಾರಿ ಗೆಲುವಿಗೋಸ್ಕರ ಆಳವಾದ ಗಾಯಗಳನ್ನು ಮಾಡುತ್ತಿದ್ದಾರೆ"ಎಂದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಎನ್‌ಆರ್‌ಸಿ ಕುರಿತು ನೋಟಿಸ್‌ನಲ್ಲಿ ಮಾತನಾಡಲು ಪ್ರತಿಪಕ್ಷಗಳಿಗೆ ಅವಕಾಶ ನೀಡದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಈ ವಿಷಯದ ಬಗ್ಗೆ ಚರ್ಚೆ ನಡೆಸುವ ಬೇಡಿಕೆಯನ್ನು ಕಾಂಗ್ರೆಸ್ ಮುಂದುವರಿಸುವುದಾಗಿ ಆನಂದ್ ಶರ್ಮಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


