ದೇಶ

ದೆಹಲಿ: ಬಿಸಿಯೂಟ ತಯಾರಿ ವೇಳೆ ಪಾತ್ರೆಗೆ ಬಿದ್ದು ಮೂರು ವರ್ಷದ ಮಗು ಸಾವು

ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಮೂರು ವರ್ಷದ ಮಗು ಪಾತ್ರೆಗೆ ಬಿದ್ದು ಸಾವನ್ನಪ್ಪಿದ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿ: ಬಿಸಿಯೂಟ ತಯಾರಿ ವೇಳೆ ಪಾತ್ರೆಗೆ ಬಿದ್ದು ಮೂರು ವರ್ಷದ ಮಗು ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಮೂರು ವರ್ಷದ ಮಗು ಪಾತ್ರೆಗೆ ಬಿದ್ದು ಸಾವನ್ನಪ್ಪಿದ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ಮಿರ್ಜಾಪುರದ ಲಾಲ್‌ಗಂಜ್ ಪ್ರದೇಶದ ರಾಂಪುರ ಅತಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಸಾವನ್ನಪ್ಪಿದ ಬಾಲಕಿಯನ್ನು 3 ವರ್ಷದ ಅಂಚಲ್ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಮ್‌ ಲಿಯಾನ್ ಯಾದವ್ ಅವರು, 'ಶಾಲೆಯಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹಾಕಲಾಗಿತ್ತು. ಈ ವೇಳೆ ಓಡಿಬಂದ ಬಾಲಕಿಯ ಕಾಲು ಅದಕ್ಕೆ ತಾಗಿ ಎಡವಿದ್ದಾಳೆ, ಬಳಿಕ ಬಾಲಕಿ ಎದುರಿನಲ್ಲಿ ಆಹಾರ ತಯಾರಿಸುತ್ತಿದ್ದ ಪಾತ್ರೆಯೊಳಗೆ ಬಿದ್ದಿದ್ದಾಳೆ.  ಕಂಟೇನರ್‌ಗೆ ಬಿದ್ದ ಮಗುವನ್ನು ಶಿಕ್ಷಕರು ಮತ್ತು ಅಡುಗೆಯವರು ಕೂಡಲೇ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಬಳಿಕ ಮಿರ್ಜಾಪುರದ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಶೇ 80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಂಜೆ 5ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ ಎಂದು ಹೇಳಿದ್ದಾರೆ.

ಮಿರ್ಜಾಪುರ ಜಿಲ್ಲಾಧಿಕಾರಿ ಸುಶೀಲ್ ಪಟೇಲ್ ಮಾತನಾಡಿ, ಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಯಾದವ್ ಅವರನ್ನು ಕೂಡಲೇ ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಎಫ್‌ಐಆರ್ ದಾಖಲಾಗಲಿದೆ ಎಂದು ಹೇಳಿದರು. ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಘಟನೆಗೆ ಅಡುಗೆ ಮಾಡುವವನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಮಗು ಪಾತ್ರೆಗೆ ಬೀಳುವುದನ್ನು ಅಡುಗೆ ತಯಾರಿಸುತ್ತಿದ್ದಾತ ಗಮನಿಸಲಿಲ್ಲ. ಏಕೆಂದರೆ ಆಗ ಆತ ಇಯರ್ ಫೋನ್ ಹಾಕಿಕೊಂಡಿದ್ದರು. ವಿಷಯ ತಿಳಿಯುತ್ತಲೇ ಗಾಬರಿಯಾಗಿ ಓಡಿ ಹೋದರು ಎಂದು ಬಾಲಕಿ ಪೋಷಕರು ಆರೋಪಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.