ನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆ ಜಾರಿ: ಬುಧವಾರ ಕಾದಿಟ್ಟ ತೀರ್ಪು ಪ್ರಕಟ
ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಆಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರ ಸರಕಾರವು ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕಾಯ್ದಿಟ್ಟ ತೀರ್ಪು ಪ್ರಕಟಿಸಲಿದೆ

ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಆಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರ ಸರಕಾರವು ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕಾಯ್ದಿಟ್ಟ ತೀರ್ಪು ಪ್ರಕಟಿಸಲಿದೆ
ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ಕುರಿತು ಶನಿವಾರ ಮತ್ತು ಭಾನುವಾರ ವಿಶೇಷ ವಿಚಾರಣೆ ನಡೆಸಿದ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟ್ ಫೆಬ್ರವರಿ 2 ರಂದು ತೀರ್ಪು ಕಾಯ್ದಿರಿಸಿದ್ದರು.
ತಿಹಾರ್ ಜೈಲಿನಲ್ಲಿರುವ ಮುಕೇಶ್ ಕುಮಾರ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಅಕ್ಷಯ್ ಕುಮಾರ್ ಅವರನ್ನು ಫೆಬ್ರವರಿ 1 ರಂದು ಗಲ್ಲಿಗೇರಿಸಲು ಹೊರಡಿಸಲಾಗಿದ್ದ ಡೆತ್ ವಾರೆಂಟ್ ಗೆ ದೆಹಲಿ ನ್ಯಾಯಾಲಯ ಜ.31 ರಂದು ತಾತ್ಕಾಲಿಕ ತಡೆ ನೀಡಿದ್ದನ್ನು ಕೇಂದ್ರ ಸರ್ಕಾರ ಹೈಕೋರ್ಟ್ ನಲ್ಲಿ ಪ್ರಶ್ನಿಸಿತು.
ಈ ಪ್ರಕರಣದಲ್ಲಿ ಅಪರಾಧಿಯೊಬ್ಬನ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳ ವಿಚಾರಣೆ ಮುಂದೆ ಬಾಕಿ ಇರುವಾಗ ನಾಲ್ವರನ್ನೂ ಒಟ್ಟಿಗೆ ನೇಣಿಗೇರಿಸಲು ಸಾಧ್ಯವಿಲ್ಲ ಎಂಬ ನಿಯಮಗಳ ಅನುಸಾರ ಪಟಿಯಾಲ ಹೌಸ್ ಕೋರ್ಟ್ ಗಲ್ಲಿಗೇರಿಸಲು ತಾತ್ಕಾಲಿಕ ತಡೆ ನೀಡಿತ್ತು.
ಅಪರಾಧಿಗಳು ನೇಣು ಜಾರಿ ವಿಳಂಬಗೊಳಿಸಲು ತಂತ್ರ ನಡೆಸುತ್ತಿದ್ದಾರೆಂದು ಹೇಳಿ ಕೇಂದ್ರ ತಡೆಯಾಜ್ಞೆ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್ ಮೊರೆ ಹೋಗಿತ್ತು. ಮಂಗಳವಾರ ನಿರ್ಭಯಾ ಪೋಷಕರ ಪರ ವಕೀಲರು ಕೇಂದ್ರದ ಅರ್ಜಿ ಸಂಬಂಧ ತ್ವರಿತಗತಿಯಲ್ಲಿ ತೀರ್ಪು ಪ್ರಕಟಿಸಬೇಕೆಂದು ಕೋರ್ಟ್‌ನಲ್ಲಿ ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


