ದೇಶಾದ್ಯಂತ ಎನ್ಆರ್ಸಿ ಜಾರಿ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ: ಲೋಕಸಭೆಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ
ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಜಾರಿಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಲೋಕಸಭೆಗೆ ಲಿಖಿತ ಉತ್ತರ ನೀಡಿದೆ.

ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಜಾರಿಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಲೋಕಸಭೆಗೆ ಲಿಖಿತ ಉತ್ತರ ನೀಡಿದೆ.
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರೀತಿ ಎನ್ಆರ್ಸಿಯನ್ನೂ ದೇಶಾದ್ಯಂತ ಜಾರಿಗೊಳಿಸುವ ಬಗ್ಗೆ ಯಾವುದಾದರು ಯೋಜನೆ ಹೊಂದಿದೆಯೇ ಎಂಬ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಈ ಕ್ಷಣದವರೆಗೆ ಸರ್ಕಾರ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೇಶಾದ್ಯಂತ ಎನ್ ಆರ್ ಸಿ ಜಾರಿ ಕುರಿತ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವು ಹೇಗೆ ಜನರ ಮೇಲೆ ಹೆಚ್ಚುವರಿ ಭಾರ ಹೊರಿಸಲು ಸಾಧ್ಯ ಎಂದು ರೈ ಪ್ರಶ್ನಿಸಿದ್ದಾರೆ.
ಸೋಮವಾರದಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನದಲ್ಲಿ ರಾಜ್ಯಸಭೆ ಹಾಗೂ ಲೋಕಸಭೆ ಎರಡರಲ್ಲೂ ಪ್ರತಿಪಕ್ಷಗಳು ಹೆಚ್ಚಾಗಿ ಸಿಎಎ ಹಾಗೂ ಎನ್ ಆರ್ ಸಿ ಬಗ್ಗೆಯೇ ಹೆಚ್ಚಾಗಿ ಚರ್ಚೆ ನಡೆಸಿದ್ದಾರೆ. ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್ಸಿಗಳು ಮುನ್ನೆಲೆಗೆ ಬಂದಾಗಿನಿಂದಲೂ ರಾಷ್ಟ್ರದ ಬಹುತೇಕ ಜನರು ರಸ್ತೆಗಿಳಿದು ಹೋರಾಟ ಮಾಡುತ್ತಿದ್ದಾರೆ.
ಎನ್ಪಿಆರ್ನ್ನು ಹಿಂದೆಯೂ ಮಾಡಲಾಗಿತ್ತು. ಆದರೆ ಆಗ ಅದರಲ್ಲಿದ್ದ ಪ್ರಶ್ನೆಗಳು ತೀರ ಸರಳವಾಗಿದ್ದವು. ಆದರೆ ಈಗಿನ ಕೇಂದ್ರ ಸರ್ಕಾರದ ಎನ್ಪಿಆರ್ನಲ್ಲಿ ತಂದೆಯ ಹುಟ್ಟಿದ ದಿನಾಂಕದಂತಹ ಕ್ಲಿಷ್ಟ ಪ್ರಶ್ನೆಗಳನ್ನು ಇಡಲಾಗಿದೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ, ಕಾಂಗ್ರೆಸ್ನ ಗುಲಾಬ್ ನಭಿ ಆಜಾದ್ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


