ತಮಿಳುನಾಡು: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿದ ಸರ್ಕಾರ
ತಮಿಳುನಾಡಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಇಲ್ಲ ಎಂದು ಸರ್ಕಾರ ಮಂಗಳವಾರ ಪ್ರಕಟಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ನಿರಾಳಪಡುವಂತಾಗಿದೆ

ಚೆನ್ನೈ: ತಮಿಳುನಾಡಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಇಲ್ಲ ಎಂದು ಸರ್ಕಾರ ಮಂಗಳವಾರ ಪ್ರಕಟಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ನಿರಾಳಪಡುವಂತಾಗಿದೆ
ಈ ಸಂಬಂಧ ಶಿಕ್ಷಣ ಸಚಿವ ಕೆ. ಎ. ಸೆಂಗೊಟ್ಟೈಯಾನ್ ಆದೇಶವೊಂದನ್ನು ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ 2019 ಸೆಪ್ಟೆಂಬರ್ 13 ರಂದು ಹೊರಡಿಸಲಾಗಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಪರೀಕ್ಷೆ ಬಗ್ಗೆ ಶಿಕ್ಷಣ ವಲಯದ ವಿವಿಧ ಪಾಲುದಾರರಿಂದ ಅನೇಕ ಪ್ರತಿಕ್ರಿಯೆ ಹಾಗೂ ಟೀಕೆಗಳು ಬಂದಿದ್ದವು. ಇವೆಲ್ಲವುಗಳನ್ನು ಪರಿಗಣಿಸಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೆಲ ದಿನಗಳ ಹಿಂದೆ 8ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದ. ಬೋರ್ಡ್ ಪರೀಕ್ಷೆಯ ಒತ್ತಡದಿಂದ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೋಷಕರು ಶಂಕಿಸಿದ್ದರು. ಇದರ ಬೆನ್ನಲ್ಲೇ ಸರ್ಕಾರ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


