ದೇಶ

ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ: ಆಸ್ಪತ್ರೆ ವೈದ್ಯರು

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ: ಆಸ್ಪತ್ರೆ ವೈದ್ಯರು
ಸೋನಿಯಾ ಗಾಂಧಿ
Published On :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. 

ಉದರ ಸೋಂಕಿನಿಂದಾಗಿ ಸೋನಿಯಾ ಗಾಂಧಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸುತ್ತಿದ್ದು, ಸ್ಥಿರವಾಗಿದೆ ಎೆಂದು ಆಸ್ಪತ್ರೆ ಮುಖ್ಯಸ್ಥ ಡಾ.ಡಿ.ಎಸ್.ರಾಣಾ ಅವರು ಹೇಳಿದ್ದಾರೆ. 

ಅನಾರೋಗ್ಯದಿಂದಾಗಿ ಸೋನಿಯಾ ಗಾಂಧಿಯವರು ಭಾನುವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹೊಟ್ಟೆನೋವಿನಿಂದ ಸೋನಿಯಾ ಬಳಲುತ್ತಿದ್ದಾರೆಂದು ಹೇಳಲಾಗುತ್ತಿತ್ತು. 

ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಕೇಂದ್ರ ಹಣಕಾಸು ಬಜೆಟ್ ಮಂಡನೆಯ ವೇಳೆ ಸಂಸತ್ತಿನಲ್ಲಿ ಸೋನಿಯಾ ಅವರು ಉಪಸ್ಥಿತರಿರಲಿಲ್ಲ. 2011ರಲ್ಲಿ ಸೋನಿಯಾ ಅವರು ಕಾಯಿಲೆಯೊಂದಕ್ಕೆ ಅಮೆರಿಕಾದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಆರೋಗ್ಯ ತಪಾಸಣೆಗಾಗಿ ಆಗಾಗ ಅಮೆರಿಕಾಕ್ಕೆ ಸೋನಿಯಾ ತೆರಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.