ನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ವಿರುದ್ಧ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾಗೊಳಿಸಿದ ರಾಷ್ಟ್ರಪತಿ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು ತಿರಸ್ಕರಿಸಿದ್ದಾರೆ.

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು ತಿರಸ್ಕರಿಸಿದ್ದಾರೆ.
ಸಹ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ ಮನವಿಯನ್ನು ರಾಷ್ಟ್ರಪತಿ ಕೋವಿಂದ್ ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಮರಣ ದಂಡನೆ ಶಿಕ್ಷೆಗೊಳಗಾಗಿರುವ ಆರೋಪಿಗಳು ಶನಿವಾರ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು.
ಇಂದು ದೆಹಲಿ ಹೈಕೋರ್ಟ್ ಅಪರಾಧಿಗಳಿಗೆ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸಲು ಒಂದು ವಾರ ಕಾಲಾವಕಾಶ ನೀಡಿತು ಮತ್ತು ಅವರ ಮರಣದಂಡನೆಗಾಗಿ ವಿಚಾರಣೆಯನ್ನು ಪ್ರಾರಂಭಿಸಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿತು.
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ರಾಷ್ಟ್ರಪತಿ ಅವರು ಈ ಆದೇಶ ನೀಡಿದ್ದಾರೆ.
ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ರನ್ನು ಫೆ.1ರಂದು ನೇಣಿಗೆ ಏರಿಸಬೇಕಿತ್ತು. ಆದರೆ ಈ ಮಧ್ಯೆ ಕೆಲವು ಕಾನೂನು ಪ್ರಕ್ರಿಯೆಗಳಿಂದಾಗಿ ದೆಹಲಿ ನ್ಯಾಯಾಲಯ ಅವರ ಮರಣದಂಡನೆಗೆ ತಡೆ ನೀಡಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


