ಜಮ್ಮು-ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್: ಯೋಧ ಹುತಾತ್ಮ, ಇಬ್ಬರು ಉಗ್ರರ ಸೆರೆ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದ್ದು ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದ್ದು ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಯೋಧ ಹುತಾತ್ಮರಾಗಿದ್ದಾರೆ.
ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ. ಶ್ರೀನಗರದ ಪರಿಮ್ ಪೊರಾ ಚೆಕ್ ಪೋಸ್ಟ್ ಬಳಿ ಈ ದಾಳಿ ನಡೆದಿದ್ದು ಭದ್ರತಾ ಪಡೆ ಯೋಧರು ಗಾಯಗೊಂಡ ಓರ್ವ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ತಿಂಗಳು ಗಣರಾಜ್ಯೋತ್ಸವಕ್ಕೆ ಮೊದಲು ಜಮ್ಮು-ಕಾಶ್ಮೀರ ಪೊಲೀಸರು ಜೈಶ್ ಇ ಮೊಹಮ್ಮದ್ ಸಂಘಟನೆಯ ಘಟಕವನ್ನು ಬೇಧಿಸಿ ಇಬ್ಬರು ಉಗ್ರರನ್ನು ಬಂಧಿಸಿದ್ದರು. ಈ ಉಗ್ರರು ಗಣರಾಜ್ಯೋತ್ಸವ ದಿನ ದೇಶಾದ್ಯಂತ ದೊಡ್ಡ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.
ಈ ತಿಂಗಳ ಆರಂಭದಲ್ಲಿ ಜಮ್ಮು-ಕಾಶ್ಮೀರದ ಲಾಲ್ ಚೌಕ್ ಬಳಿ ಸಿಆರ್ ಪಿಎಫ್ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಜವಾನರು ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


