ಕುನಾಲ್ ಕಾಮ್ರಾ ಹೆಸರಿನ ಟಿಕೆಟ್ ರದ್ದುಗೊಳಿಸಿದ ಏರ್ ಇಂಡಿಯಾ, ಪರಿಶೀಲನೆ ಬಳಿಕ ಪ್ರಯಾಣಕ್ಕೆ ಅವಕಾಶ
ವಿಮಾನದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರನ್ನು ಇಂಡಿಗೋ, ಏರ್ ಇಂಡಿಯಾ ಹಾಗೂ ಸ್ಪೈಸ್ ಜೆಟ್ ವಿಮಾನ ಸಂಸ್ಥೆ 6 ತಿಂಗಳುಗಳ ಕಾಲ ಪ್ರಯಾಣ ನಿರ್ಬಂಧ ವಿಧಿಸಿವೆ.

ನವದೆಹಲಿ: ವಿಮಾನದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರನ್ನು ಇಂಡಿಗೋ, ಏರ್ ಇಂಡಿಯಾ ಹಾಗೂ ಸ್ಪೈಸ್ ಜೆಟ್ ವಿಮಾನ ಸಂಸ್ಥೆ 6 ತಿಂಗಳುಗಳ ಕಾಲ ಪ್ರಯಾಣ ನಿರ್ಬಂಧ ವಿಧಿಸಿವೆ.
ಈ ಮಧ್ಯೆ ಫೆಬ್ರವರಿ 3ರಂದು ಕುನಾಲ್ ಕಾಮ್ರಾ ಹೆಸರಿನ ವ್ಯಕ್ತಿಯೊಬ್ಬರು ಜೈಪುರದಿಂದ - ಮುಂಬೈಗೆ ಪ್ರಯಾಣಿಸಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಆದರೆ ಇದು ಕಾಮಿಡಿಯನ್ ಕಾಮ್ರಾ ಎಂದು ತಪ್ಪಾಗಿ ತಿಳಿದುಕೊಂಡ ಏರ್ ಇಂಡಿಯಾ ಸಿಬ್ಬಂದಿ ಅವರ ಟಿಕೆಟ್ ಅನ್ನು ರದ್ದುಗೊಳಿಸಿದೆ. ಆದರೆ ಪರಿಶೀಲನೆ ಬಳಿಕ ಮತ್ತೆ ಅವರಿಗೆ ಟಿಕೆಟ್ ನೀಡಿ, ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ.
ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಏರ್ ಇಂಡಿಯಾ ವಕ್ತಾರರು, ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಏರ್ ಇಂಡಿಯಾ ಪ್ರಯಾಣ ನಿರ್ಬಂಧ ಪಟ್ಟಿಯಲ್ಲಿದ್ದಾರೆ ಮತ್ತು ಅವರ ಹೆಸರನ್ನು ಕಂಪ್ಯೂಟರ್ ನಲ್ಲಿ ಉಲ್ಲೇಖಿಸಲಾಗಿದೆ. ಕಂಪ್ಯೂಟರ್ ಸ್ವಯಂಚಾಲಿತವಾಗಿ ತಿರಸ್ಕರಿಸಿದೆ. ಆದರೆ ಪರಿಶೀಲನೆ ನಂತರ ಅವರು ಹಾಸ್ಯ ಕಲಾವಿದ ಅಲ್ಲ ಎಂಬುದು ಖಚಿತವಾಗಿದ್ದು, ಅವರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ವಿಮಾನದಲ್ಲಿ ವಿಡಿಯೋ ಮಾಡಿ ಅರ್ನಬ್ ಗೋಸ್ವಾಮಿ ಅವರನ್ನು ಹೀಯಾಳಿಸಿದ ಕುನಾಲ್ ಕಾಮ್ರಾ ಅವರಿಗೆ ಜನವರಿ 28 ರಿಂದ ವಿಮಾನಯಾನ ಸಂಸ್ಥೆಗಳು ನಿರ್ಬಂಧ ಹೇರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


