ದೇಶ

ಜಮ್ಮು-ಕಾಶ್ಮೀರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಮೆಹಬೂಬಾ, ಒಮರ್ ಅಬ್ದುಲ್ಲಾ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಹಾಗೂ ನ್ಯಾಷನಲ್ ಕಾನ್ಫರೆನ್ಸ್ , ಪಿಡಿಪಿಯ ಇತರ ಇಬ್ಬರು ರಾಜಕಾರಣಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಮೆಹಬೂಬಾ, ಒಮರ್ ಅಬ್ದುಲ್ಲಾ ವಿರುದ್ಧ ಪ್ರಕರಣ ದಾಖಲು
ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ
Published On :

ಶ್ರೀನಗರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಹಾಗೂ ನ್ಯಾಷನಲ್ ಕಾನ್ಫರೆನ್ಸ್ , ಪಿಡಿಪಿಯ ಇತರ ಇಬ್ಬರು ರಾಜಕಾರಣಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಫ್ತಿ ಬಂಧನದಲ್ಲಿರುವ ಬಂಗಲೆಗೆ ಆದೇಶವನ್ನು ಪೊಲೀಸರೊಂದಿಗೆ ಮ್ಯಾಜಿಸ್ಟ್ರೇಟ್ ವೊಬ್ಬರು ಆದೇಶ ಕಳುಹಿಸಿದ್ದಾರೆ. ಅಬ್ದುಲ್ಲಾ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ  ಅವರು ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪ್ರಧಾನ ಕಾರ್ಯದರ್ಶಿ ಆಲಿ ಮೊಹಮ್ಮದ್ ಸಾಗರ್ ಅವರಿಗೂ ನೋಟಿಸ್ ಕಳುಹಿಸಲಾಗಿದೆ. ಇದೇ ರೀತಿಯಲ್ಲಿ ಪಿಡಿಪಿ ಮುಖಂಡರಾದ ಸರ್ತಾಜ್ ಮಾದಾನಿ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.  ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ 2019 ಆಗಸ್ಟ್ 5 ರಿಂದಲೂ ಸಾಗರ್ ಹಾಗೂ ಮಾದಾನಿ ಗೃಹ ಬಂಧನದಲ್ಲಿದ್ದರು. ಅವರ ಆರು ತಿಂಗಳ ಕಸ್ಟಡಿ ಗುರುವಾರ ಕೊನೆಗೊಂಡಿತು

ಇದಕ್ಕೂ ಮುಂಚೆ ಮಾಜಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಹ್ನದ್ ವೀರಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ, ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.