ನಿರ್ಭಯಾ ಅಪರಾಧಿಗಳಿಗೆ ಗಲ್ಲು: ಸುಪ್ರೀಂನಿಂದ ನಾಳೆ ಕೇಂದ್ರದ ಅರ್ಜಿಯ ವಿಚಾರಣೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ.

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ.
ಕೇಂದ್ರದ ಪರವಾಗಿ ಹೆಚ್ಚುವರಿ ಸೊಲಿಸಿಟರ್ ಜನರಲ್ ಕೆಎಂ ನಟರಾಜ್ ಅವರು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರ ಪೀಠಕ್ಕೆ ಮನವಿ ಮಾಡಿದರು. ಸುಪ್ರೀಂ ಪೀಠ ನಾಳೆ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದೆ.
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆಯನ್ನು ತಡೆಹಿಡಿದ ದೆಹಲಿ ಪಟಿಯಾಲ ಹೌಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್, ನಾಲ್ವರು ಅಪರಾಧಿಗಳನ್ನೂ ಒಟ್ಟಿಗೇ ಗಲ್ಲಿಗೇರಿಸಬೇಕು. ಬೇರೆಬೇರೆಯಾಗಿ ನೇಣಿಗೆ ಹಾಕುವಂತಿಲ್ಲ ಎಂದು ತೀರ್ಪು ನೀಡಿತ್ತು.
ಹೈಕೋರ್ಟ್ ತೀರ್ಪು ನೀಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿವೆ.
ನಿರ್ಭಯಾ ಅಪರಾಧಿಗಳು ಯಾವುದೇ ಕಾನೂನು ಪ್ರಕ್ರಿಯೆ ಕೈಗೊಳ್ಳುವುದಿದ್ದರೂ, ಅರ್ಜಿ ಸಲ್ಲಿಸುವುದಿದ್ದರೂ ಇನ್ನೊಂದು ವಾರದಲ್ಲಿ ಅದನ್ನೆಲ್ಲ ಪೂರ್ತಿಗೊಳಿಸಿಕೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ರನ್ನು ಫೆ.1ರಂದು ನೇಣಿಗೆ ಏರಿಸಬೇಕಿತ್ತು. ಆದರೆ ಈ ಮಧ್ಯೆ ಕೆಲವು ಕಾನೂನು ಪ್ರಕ್ರಿಯೆಗಳಿಂದಾಗಿ ದೆಹಲಿ ನ್ಯಾಯಾಲಯ ಅವರ ಮರಣದಂಡನೆಗೆ ತಡೆ ನೀಡಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು. ಫೆ.2ರಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟ್ ತೀರ್ಪು ಕಾಯ್ದಿರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


