ರಾಜ್ಯಸಭೆಯಲ್ಲಿ ಮೋದಿ ಭಾಷಣ: ಪದವೊಂದನ್ನು ಕಡತದಿಂದ ತೆಗೆದು ಹಾಕಲು ನಿರ್ದೇಶಿಸಿದ ಸಭಾಪತಿ
ಅಪರೂಪದ ವಿದ್ಯಮಾನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪದವೊಂದನ್ನು ಕಡತದಿಂದ ತೆಗೆದು ಹಾಕಲಾಗಿದೆ.

ನವದೆಹಲಿ:ಅಪರೂಪದ ವಿದ್ಯಮಾನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪದವೊಂದನ್ನು ಕಡತದಿಂದ ತೆಗೆದು ಹಾಕಲಾಗಿದೆ.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಬಳಸಿದ ಪದವೊಂದನ್ನು ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಕಡತದಿಂದ ತೆಗೆದು ಹಾಕಿದ್ದಾರೆ.
ಫೆಬ್ರವರಿ 6ರಂದು ಸಂಜೆ 6 -20 ಮತ್ತು 6-30ರಲ್ಲಿನ ರಾಜ್ಯಸಭಾ ಪ್ರಕ್ರಿಯೆಯ ನಿರ್ದಿಷ್ಠ ಭಾಗವನ್ನು ತೆಗೆದುಹಾಕುವಂತೆ ಸಭಾಪತಿ ನಿರ್ದೇಶಿಸಿದ್ದಾರೆ ಎಂದು ರಾಜ್ಯಸಭಾ ಕಾರ್ಯದರ್ಶಿ ಹೇಳಿದ್ದಾರೆ.
ಪ್ರತಿದಿನ ಕಲಾಪ ಮುಗಿದ ಬಳಿಕ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು ದಾಖಲೆಗಳನ್ನು ಪರಿಶೀಲಿಸುತ್ತಾರೆ. ಯಾವುದಾದರೂ ಪದ ಸದನಕ್ಕೆ ಹೊಂದಿಕೆಯಾಗುವುದಿಲ್ಲ ಎನ್ನುವುದು ಮನವರಿಕೆಯಾದರೆ ತೆಗೆಸಿ ಹಾಕುತ್ತಾರೆ. ಹಿಂದೆ ಹಲವಾರು ಸಂದರ್ಭಗಳಲ್ಲಿ ಇದು ನಡೆದಿದೆ. ಆದರೆ ಪ್ರಧಾನಿ ಮೋದಿಯವರು ಆಡಿದ ಪದವನ್ನೇ ತೆಗೆಸಿ ಹಾಕಿರುವ ಕೆಲವೇ ಕೆಲವು ದೃಷ್ಟಾಂತಗಳಲ್ಲಿ ಇದೂ ಒಂದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


