ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ: ಗುಂಡಿಟ್ಟು ಮಹಿಳಾ ಎಸ್‍ಐ ಹತ್ಯೆ
ರಾತ್ರೋರಾತ್ರಿ ಮಹಿಳಾ ಎಸ್‍ಐಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ.

ನವದೆಹಲಿ: ರಾತ್ರೋರಾತ್ರಿ ಮಹಿಳಾ ಎಸ್‍ಐಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ.
ಪ್ರೀತಿ ಅಹ್ಲಾವತ್ ಕೊಲೆಯಾದ ಎಸ್‍ಐ. ನಗರದ ಪಾಟ್‍ಪರ್ಗಂಜ್ ಕೈಗಾರಿಕಾ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರೀತಿ ಅವರನ್ನು ಪೋಸ್ಟ್ ಮಾಡಲಾಗಿತ್ತು.
ರಾತ್ರಿ ಸುಮಾರು 9.30ಕ್ಕೆ ಈ ಘಟನೆ ಬಗ್ಗೆ ನಮಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ನಮಗೆ ಕರೆ ಬರುತ್ತಿದ್ದಂತೆ ನಾವು ಸ್ಥಳಕ್ಕೆ ಭೇಟಿ ನೀಡಿದ್ದೆವು. ಈ ವೇಳೆ ಪ್ರೀತಿ ಅವರ ತಲೆಗೆ ಗುಂಡೇಟು ಗಾಯಗಳಾಗಿದೆ.
ನಾವು ಶಂಕಿತರನ್ನು ಗುರುತಿಸಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಡಿ ಮಿಶ್ರಾ ಹೇಳಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಮೂರು ಖಾಲಿ ಕಾರ್ಟ್ರಿಡ್ಜ್ ಗಳು ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ.
ವೈಯಕ್ತಿಕ ದ್ವೇಷದಿಂದ ಆಕೆಯ ಬ್ಯಾಚ್ ಮೇಟ್ ಈ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


