ದೆಹಲಿ ಚುನಾವಣೆ: ಮತದಾನದ ಅಂತಿಮ ಅಂಕಿ-ಅಂಶ ಪ್ರಕಟ ವಿಳಂಬಕ್ಕೆ ಕೇಜ್ರಿ ಅಸಮಾಧಾನ: ಆಯೋಗಕ್ಕೆ ಪ್ರಶ್ನೆ
ದೆಹಲಿಯಲ್ಲಿ ವಿಧಾನಸಭೆಗೆ ನಡೆದಿದ್ದ ಮತದಾನದ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆಗೆ ನಡೆದಿದ್ದ ಮತದಾನದ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಳಂಬ ಮಾಡುತ್ತಿರುವುದು ಅಚ್ಚರಿ ಉಂಟುಮಾಡಿದೆ. ಮತದಾನ ಪ್ರಕ್ರಿಯೆ ಮುಕ್ತಾಯಗೊಂಡು ಹಲವು ಗಂಟೆಗಳೇ ಕಳೆದಿದ್ದರೂ ಚುನಾವಣಾ ಆಯೋಗ ಏಕೆ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸುತ್ತಿಲ್ಲ ಎಂದು ಕೇಜ್ರಿವಾಲ್ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಶನಿವಾರ ರಾತ್ರಿ ವೇಳೆಗೆ ಚುನಾವಣಾ ಆಯೋಗ ಪ್ರಕಟಿಸಿರುವ ಅಂಕಿ-ಅಂಶಗಳ ಪ್ರಕಾರ ದೆಹಲಿಯಲ್ಲಿ ಶೇ.61.46 ರಷ್ಟು ಮತದಾನ ನಡೆದಿತ್ತು. ಇದೇ ಆಯೋಗದಿಂದ ಪ್ರಕಟಗೊಂಡ ಇತ್ತೀಚಿನ ಅಂಕಿ-ಅಂಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


