ಒಂದು ವೇಳೆ ಕೇಜ್ರಿವಾಲ್ ಗೆಲುವಾದರೆ ಅಭಿವೃದ್ಧಿ ಅಜೆಂಡಾಕ್ಕೆ ಸಿಕ್ಕ ಜಯ- ಅಧೀರ್ ರಂಜನ್ ಚೌದರಿ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಯ ಗಳಿಸಿದರೆ ಅಭಿವೃದ್ಧಿ ಅಜೆಂಡಾಕ್ಕೆ ದೊರೆತ ಗೆಲುವಾಗಲಿದೆ. ಬಿಜೆಪಿ ಸೋಲಿನೊಂದಿಗೆ ಕೋಮು ಅಜೆಂಡಾಕ್ಕೆ ಕೊನೆಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಅಧಿರ್ ರಂಜನ್ ಚೌದರಿ ಹೇಳಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಯ ಗಳಿಸಿದರೆ ಅಭಿವೃದ್ಧಿ ಅಜೆಂಡಾಕ್ಕೆ ದೊರೆತ ಗೆಲುವಾಗಲಿದೆ. ಬಿಜೆಪಿ ಸೋಲಿನೊಂದಿಗೆ ಕೋಮು ಅಜೆಂಡಾಕ್ಕೆ ಕೊನೆಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಅಧಿರ್ ರಂಜನ್ ಚೌದರಿ ಹೇಳಿದ್ದಾರೆ.
ಈ ಚುನಾವಣೆಯಲ್ಲಿ ನಾವು ಶಕ್ತಿಮೀರಿ ಹೋರಾಡುತ್ತಿವೆ. ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭಿವೃದ್ಧಿ ಅಜೆಂಡಾ ಮುನ್ನೆಲೆಗೆ ಬರುವುದೊಂದಿಗೆ ಬಿಜೆಪಿಯ ಕೋಮು ಅಜೆಂಡಾ ಕೊನೆಯಾಗಲಿದೆ ಎಂದು ಚೌದರಿ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಬಿಜೆಪಿ ಎಲ್ಲಾ ಮುಖಂಡರನ್ನು ಇಲ್ಲಿಗೆ ಕರೆಸಿಕೊಂಡಿದ್ದು, ಶಾಹೀನ್ ಬಾಗ್ ಅಂತಾ ಘೋಷಣೆ ಕೂಗುತ್ತಿದ್ದರೆ ಮತ್ತೊಂದೆಡೆ ಕೇಜ್ರಿವಾಲ್ ಮೊಹಲ್ಲಾ ಕ್ಲಿನಿಕ್ , ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಧೀರ್ಘ ಕಾಲದ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ತಿಳಿಸುವ ಕೆಲಸ ಮಾಡುತ್ತಿರುವುದಾಗಿ ಹೇಳಿದರು.
ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂಬ ಬಿಜೆಪಿ ಮುಖಂಡ ಮನೋಜ್ ತಿವಾರಿ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಹಗಲು ಕನಸು ಕಾಣುವುದು ಅವರ ಮೂಲಭೂತ ಹಕ್ಕು ಆದರೆ ಬಿಜೆಪಿ ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದಿಲ್ಲ ಎಂದು ಭವಿಷ್ಯ ನುಡಿದರು.
ಚುನಾವಣಾ ಪೂರ್ವ ಸಮೀಕ್ಷೆಯಂತೆ 70 ಸದಸ್ಯ ಬಲದ ದೆಹಲಿಯಲ್ಲಿ ಎಎಪಿ 47 ಸ್ಥಾನಗಳಿಸುವುದರೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


