ಮೀಸಲು ಮೂಲಭೂತ ಹಕ್ಕಲ್ಲ, ಮೀಸಲಿಗೆ ಆದೇಶಿಸುವ ಅಧಿಕಾರ ನ್ಯಾಯಾಲಯಕ್ಕಿಲ್ಲ: ಸುಪ್ರೀಂಕೋರ್ಟ್
ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉದ್ಯೋಗ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ. ಸರ್ಕಾರಿ ಉದ್ಯೋಗದಲ್ಲಿ ಮೀಸಲು ಬೇಕೇಬೇಕು ಎಂದು ಕೇಳುವುದಕ್ಕೆ ಅದು ಯಾವುದೇ ಮೂಲಭೂತ ಹಕ್ಕಲ್ಲ...

ನವದೆಹಲಿ: ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉದ್ಯೋಗ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ. ಸರ್ಕಾರಿ ಉದ್ಯೋಗದಲ್ಲಿ ಮೀಸಲು ಬೇಕೇಬೇಕು ಎಂದು ಕೇಳುವುದಕ್ಕೆ ಅದು ಯಾವುದೇ ಮೂಲಭೂತ ಹಕ್ಕಲ್ಲ. ಮೀಸಲು ನೀಡುವಂತೆ ಸರ್ಕಾರಗಳಿಗೆ ಆದೇಶಿಸುವ ಅಧಿಕಾರ ನ್ಯಾಯಾಲಯಗಳಿಗೂ ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ರಾಜ್ಯ ಸರ್ಕಾರಗಳು ಕೂಡ ಕಡ್ಡಾಯವಾಗಿ ಮೀಸಲು ನೀಡಬೇಕೆು ಎಂದೇನೂ ಇಲ್ಲ. ಮೀಸಲು ನೀಡಬೇಕೇ, ಬೇಡವೇ ಎಂಬ ವಿಚಾರ ರಾಜ್ಯಗಳ ವಿವೇಚನೆಗೆ ಸಂಬಂಧಿಸಿದ್ದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಮೀಸಲು ನೀಡಿಕೆ ಸಂದರ್ಭದಲ್ಲಿ ಸರ್ಕಾರಿ ನೌಕರಿಗಳಲ್ಲಿ ಎಸ್'ಸಿ-ಎಸ್'ಟಿಗೆ ಸೂಕ್ತ ಪ್ರಾತಿನಿಧ್ಯ ಇದೆಯೇ ಎಂಬ ಬಗ್ಗೆ ರಾಜ್ಯ ಸರ್ಕಾರಗಳು ಅಂಕಿ-ಅಂಶಗಳನ್ನು ಸಂಗ್ರಹಿಸಬೇಕು. ಅಗತ್ಯವಿಲ್ಲ ಎಂದು ಕಂಡುಬಂದಲ್ಲಿ ಮೀಸಲು ನೀಡಬೇಕಿಲ್ಲ ಎಂದು ನ್ಯಾ.ಎಲ್.ನಾಗೇಶ್ವರರಾವ್ ಹಾಗೂ ನ್ಯಾ.ಹೇಮಂತ ಗುಪ್ತಾ ಅವರನ್ನು ಒಳಗೊಂಡ ಪೀಠ ಹೇಳಿದೆ.
ಸಂವಿಧಾನದ 16ನೇ ಪರಿಚ್ಛೇದದ ಪ್ರಕಾರ ಎಸ್'ಸಿ-ಎಸ್'ಟಿ ಸಮುದಾಯಕ್ಕೆ ಮೀಸಲು ನೀಡುವ ವಿವೇಚನೆ ರಾಜ್ಯ ಸರ್ಕಾರಗಳಿಗೆ ಬಿಟ್ಟಿದ್ದಾಗಿದೆ. ಆದರೆ, ಸರ್ಕಾರಿ ಹುದ್ದೆಗಳಲ್ಲಿ ಮೀಸಲು ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಲಾಗದು. ರಾಜ್ಯ ಸರ್ಕಾರಗಳು ಕೂಡ ಬಡ್ತಿಯಲ್ಲಿ ಮೀಸಲು ನೀಡಲೇಬೇಕು ಎಂದೇನಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ಉತ್ತರಾಖಂಡ ಸರ್ಕಾರದ ಲೋಕೋಪಯೋಗಿ ಇಲಾಖೆಯ ಅಸಿಸ್ಟಂಟ್ ಸಿವಿಲ್ ಎಂಜಿನಿಯರ್ ಹುದ್ದೆಗೆ ಬಡ್ತಿ ಮೀಸಲು ನೀಡುವ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಕೋರ್ಟ್ ಈ ನಿರ್ಣಯ ನೀಡಿದೆ. ಉತ್ತರಾಖಂಡ ಸರ್ಕಾರ ಬಡ್ತಿ ಮೀಸಲು ನೀಡಲು ನಿರಾಕರಿಸಿತ್ತು. ಇದು ಹೈಕೋರ್ಟ್ ಮೆಟ್ಟಿಲೇರಿದಾಗ, ಸರ್ಕಾರಿ ಹುದ್ದೆಗಳಿಗೆ ಎಸ್'ಟಿ/ಎಸ್'ಟಿ ಪ್ರಾತಿನಿಧ್ಯ ಕುರಿತ ಮಾಹಿತಿ ಸಂಗ್ರಹಿಸಿ ಬಳಿಕ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


