ಶಾಹೀನ್'ಭಾಗ್ ನಲ್ಲಿ ಸಿಎಎ ವಿರುದ್ದ ಪ್ರತಿಭಟನೆ: ಪ್ರತಿಭಟನೆ ತೆರವು ಅರ್ಜಿ ಕುರಿತು ಸುಪ್ರೀಂನಲ್ಲಿ ವಿಚಾರಣೆ
ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ದೆಹಲಿಯ ಶಾಹೀನ್ ಭಾಗ್ ಹೋರಾಟ ಪ್ರಕರಣ ಕುರಿತಂತೆ ಪ್ರತಿಭಟನೆ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.

ನವದೆಹಲಿ: ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ದೆಹಲಿಯ ಶಾಹೀನ್ ಭಾಗ್ ಹೋರಾಟ ಪ್ರಕರಣ ಕುರಿತಂತೆ ಪ್ರತಿಭಟನೆ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.
ಕೆಲ ದಿನಗಳ ಹಿಂದಷ್ಟೇ ಈ ಕುರಿತ ಅರ್ಜಿಯ ವಿಚಾರಣೆ ಸರ್ವೋಚ್ಛ ನ್ಯಾಯಾಲಯದ ಅಂಗಳಕ್ಕೆ ಬಂದಿತ್ತು. ಆದರೆ, ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಈ ವಿಚಾರವನ್ನು ನ್ಯಾಯಾಲಯ ಕೈಗೆತ್ತಿಕೊಳ್ಳುವ ಯಾವುದೇ ನಿರ್ಣಯ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತ್ತು.
ಈ ವೇಳೆ ಶಾಹೀನ್ ಭಾಗ್ ಪ್ರತಿಭಟನೆ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಕೆ.ಎಂ.ಜೋಸೆಫ್ ಒಳಗೊಂಡ ದ್ವಿಸದಸ್ಯ ಪೀಠ, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಈ ಕುರಿತು ಶಾಹೀನ್ ಭಾಗ್ ಪ್ರತಿಭಟನೆಯಲ್ಲಿ ಸಮಸ್ಯೆಯಿದೆ ಎಂಬುದು ನ್ಯಾಯಾಲಯಕ್ಕೆ ಮನವರಿಕೆಯಾಗಿದೆ. ಇದನ್ನು ಹೇಗೆ ಪರಿಹರಿಸಬೇಕೆಂಬುದನ್ನು ನಾವು ನೋಡಬೇಕಿದೆ. ಆದರೆ, ಈ ಪ್ರಕರಣವನ್ನು ಸೋಮವಾರ ವಿಚಾರಣೆ ನಡೆಸುವುದೇ ಸೂಕ್ತ. ಈ ವೇಳೆಗಾಗಲೇ ನಾವು ಮತ್ತಷ್ಟು ಉತ್ತಮ ಸ್ಥಾನದಲ್ಲಿರುತ್ತೇವೆಂದು ಅಭಿಪ್ರಾಯಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


