ದೆಹಲಿ ಚುನಾವಣಾ ಫಲಿತಾಂಶದ ನಡುವೆ ಶಾಹೀನ್ ಬಾಗ್ ನಲ್ಲಿ ಮೌನ ಪ್ರತಿಭಟನೆ
ದೆಹಲಿ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿರುವಂತೆ ರಾಜಧಾನಿ ಶಾಹೀನ್ ಬಾಗ್ ನಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಪ್ರತಿಭಟನಾಕಾರರು ಇಂದು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿರುವಂತೆ ರಾಜಧಾನಿ ಶಾಹೀನ್ ಬಾಗ್ ನಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಪ್ರತಿಭಟನಾಕಾರರು ಇಂದು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗ್ಗೆಯಿಂದಲೂ ಮೌನ ವಹಿಸಿರುವ ಪ್ರತಿಭಟನಾಕಾರರು, ಪ್ರತಿಭಟನೆ ವೇಳೆಯಲ್ಲಿ ಯಾವುದೇ ವ್ಯಕ್ತಿಯೂ ಮಾತನಾಡಲಿಲ್ಲ.
ಜನರಿಗೆ ತಪ್ಪು ಸಂದೇಶ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಪ್ರತಿಭಟನಾಕಾರರು ನಿರಾಕರಿಸಿದ್ದು, ಜಾಮಿಯಾ ಹಿಂಸಾಚಾರ ಹಾಗೂ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಬಾಲಕನೊಬ್ಬ ಫ್ಲೇ ಕಾರ್ಡ್ ಪ್ರದರ್ಶನದ ಮೂಲಕ ತಿಳಿಸಿದ್ದಾನೆ.
ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಪ್ರತಿಭಟನಾಕಾರರೊಬ್ಬರು, ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಿದರು. ಇಂದು ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


