ದೆಹಲಿ ಮತದಾರರ ತೀರ್ಪನ್ನು ಬಿಜೆಪಿ ಗೌರವಿಸಲಿದೆ: ಜೆಪಿ ನಡ್ಡಾ
ದೆಹಲಿಯ ಮತದಾರರು ನೀಡಿದ ತೀರ್ಪನ್ನು ಬಿಜೆಪಿ ಗೌರವಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.

ನವದೆಹಲಿ: ದೆಹಲಿಯ ಮತದಾರರು ನೀಡಿದ ತೀರ್ಪನ್ನು ಬಿಜೆಪಿ ಗೌರವಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.
ಚುನಾವಣೆಯಲ್ಲಿ ಪಕ್ಷದ ವಿಜಯಕ್ಕಾಗಿ ದಣಿವರಿಯದೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ದೆಹಲಿಯನ್ನು ಅಭಿವೃದ್ಧಿಪಡಿಸಲಿದೆ ಎಂಬ ನಂಬಿಕೆಯೊಂದಿಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು ಜನರು ಮತ್ತೊಮ್ಮೆ ಚುನಾಯಿಸಿದ್ದಾರೆ ಎಂದು ಹೇಳಿದರು.
ದೆಹಲಿ ಜನರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ರಚನಾತ್ಮಕ ವಿರೋಧ ಪಕ್ಷದ ಪಾತ್ರವನ್ನು ಬಿಜೆಪಿ ನಿಭಾಯಿಸಲಿದೆ ಎಂದರು.
ದೆಹಲಿ ಅಭಿವೃದ್ದಿಯ ಕೆಲಸ ಮುಂದುವರಿಸಲಿದೆ ಎಂಬ ಭರವಸೆಯೊಂದಿಗೆ ಕೇಜ್ರಿವಾಲ್ ಹಾಗೂ ಅವರ ತಂಡವನ್ನು ಅಭಿನಂಧಿಸುವುದಾಗಿ ಜೆ.ಪಿ. ನಡ್ಡಾ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


