ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಸುಪ್ರೀಂ ನೋಟೀಸ್
ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ವರು ನಿರ್ಭಯಾ ಅಪರಾಧಿಗ ಳಪ್ರತಿಕ್ರಿಯೆ ಕೋರಿ ನೊಟೀಸ್ ಜಾರಿ ಮಾಡಿದೆ.

ನವದೆಹಲಿ: ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ವರು ನಿರ್ಭಯಾ ಅಪರಾಧಿಗಳ ಪ್ರತಿಕ್ರಿಯೆ ಕೋರಿ ನೊಟೀಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ಆರ್ ಬಾನುಮತಿ ನೇತೃತ್ವದ ಮೂರು ನ್ಯಾಯಾಧೀಶರ ಪೀಠವು ಈ ಅಪರಾಧಿಗಳ ಮರಣದಂಡನೆಗೆ ಹೊಸ ದಿನಾಂಕವನ್ನು ನೀಡಲು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಅಧಿಕಾರಿಗಳಿಗೆ ಅನುಮತಿ ನೀಡಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎ ಎಸ್ ಬೋಪಣ್ಣ ಅವರನ್ನೂ ಒಳಗೊಂಡ ನ್ಯಾಯಪೀಠವು ಕೇಂದ್ರ ಮತ್ತು ದೆಹಲಿ ಸರ್ಕಾರವು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆಗೆ ಒಳಪಡಿಸುವ ಮೊದಲು ವಿಚಾರಣಾ ನ್ಯಾಯಾಲಯವು ಅಪರಾಧಿಗಳ ಮರಣದಂಡನೆಗೆ ಹೊಸ ದಿನಾಂಕವನ್ನು ನೀಡಲು ಇದು ಅಡ್ಡಿಯಲ್ಲ ಎಂದು ಸ್ಪಷ್ಟಪಡಿಸಿತು
ಕೇಂದ್ರ ಮತ್ತು ದೆಹಲಿ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಅಪರಾಧಿಗಳ ಮರಣದಂಡನೆ "ಸಂತೋಷಕ್ಕಾಗಿ" ಅಲ್ಲ, ಅಧಿಕಾರಿಗಳು ಕಾನೂನಿನ ಆದೇಶವನ್ನು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


