ಮತ ಎಣಿಕೆಯಲ್ಲಿ ನಿಖರತೆ ಕಾಯ್ದುಕೊಳ್ಳುವುದು ನಮ್ಮ ಆದ್ಯತೆ: ದೆಹಲಿ ಚುನಾವಣಾ ಆಯೋಗ
ದೆಹಲಿ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯದಲ್ಲಿ ನಿಖರತೆ ಕಾಪಾಡುವುದರ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಿದೆ ಎಂದು ದೆಹಲಿ ಚುನಾವಣಾಧಿಕಾರಿ ರಣಬೀರ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ದೆಹಲಿ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯದಲ್ಲಿ ನಿಖರತೆ ಕಾಪಾಡುವುದರ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಿದೆ ಎಂದು ದೆಹಲಿ ಚುನಾವಣಾಧಿಕಾರಿ ರಣಬೀರ್ ಸಿಂಗ್ ಹೇಳಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಲ್ಲಿ ಮತ ಎಣಿಕೆ ಕಾರ್ಯ ಆರಂಭವಾದ ನಂತರ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಭದ್ರತೆಗೆ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಸಮಯಕ್ಕೆ ಸರಿಯಾಗಿ ಮತ ಎಣಿಕೆ ಆರಂಭವಾಗಿದ್ದು ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ಕೆಲಸಗಳು ನಡೆದಿವೆ ಎಂದರು.
ಮೊದಲಿಗೆ ಅಂಚೆ ಮತ ಎಣಿಕೆ ನಂತರ ವಿದ್ಯುನ್ಮಾನ ಮತ ಎಣಿಕೆ ನಡೆದಿದ್ದು ಎಲ್ಲಾ ಕೇಂದ್ರಗಳಲ್ಲಿ ನಿಖರವಾಗಿ ಮತ ಎಣಿಕೆ ಮಾಡುವುದು ನಮ್ಮ ಕೆಲಸವಾಗಿತ್ತು ಎಂದರು.
ಸದ್ಯ ಆಮ್ ಆದ್ಮಿ ಪಕ್ಷ 54 ಕ್ಷೇತ್ರಗಳಲ್ಲಿ, ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿವೆ. ಕಾಂಗ್ರೆಸ್ ಈ ಬಾರಿಯೂ ಖಾತೆ ತೆರೆಯುವ ನಿರೀಕ್ಷೆಯನ್ನು ಹೊಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


