ಕೇಜ್ರೀವಾಲ್ ಭಯೋತ್ಪಾಕನಲ್ಲ, ರಾಷ್ಟ್ರೀಯವಾದಿ ಎಂದು ದೆಹಲಿ ಸಾಬೀತುಪಡಿಸಿದೆ: ಸಂಜಯ್ ಸಿಂಗ್
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಹಾಗೂ ಪಕ್ಷದ ದೆಹಲಿ ಉಸ್ತುವಾರಿ ಸಂಜಯ್ ಸಿಂಗ್, ದೆಹಲಿಯ ಜನರು ಅರವಿಂದ ಕೇಜ್ರೀವಾಲ್ ಭಯೋತ್ಪಾದಕನಲ್ಲ ಬದಲಿಗೆ...

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಹಾಗೂ ಪಕ್ಷದ ದೆಹಲಿ ಉಸ್ತುವಾರಿ ಸಂಜಯ್ ಸಿಂಗ್, ದೆಹಲಿಯ ಜನರು ಅರವಿಂದ ಕೇಜ್ರೀವಾಲ್ ಭಯೋತ್ಪಾದಕನಲ್ಲ ಬದಲಿಗೆ, ರಾಷ್ಟ್ರೀಯವಾದಿ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಂಗ್, ದೆಹಲಿಯ 2 ಕೋಟಿ ಜನರು ಕೇಜ್ರೀವಾಲ್ ಅವರ ಆಡಳಿತವನ್ನು ಒಪ್ಪಿಕೊಂಡಿದೆ. ಅವರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ.
70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ಎಎಪಿ 60 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 12 ಸ್ಥಾನಗಳಲ್ಲಿ ಮುಂದಿದ್ದರೆ ಕಾಂಗ್ರೆಸ್ ಶೂನ್ಯ ಸಂಪಾದನೆ ದಾಖಲಿಸಿದೆ.
ಮುಖ್ಯಮಂತ್ರಿ ಕೇಜ್ರೀವಾಲ್ ನವದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಸುನೀಲ್ ಕುಮಾರ್ ಯಾದವ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


