ದೇಶ

ಇವಿಎಂ ತಿರುಚಲು ಸಾಧ್ಯವಿಲ್ಲ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆ ಇಲ್ಲ: ಚುನಾವಣಾ ಆಯುಕ್ತ ಆರೋರಾ

ವಿದ್ಯುನ್ಮಾನ ಮತಯಂತ್ರ(ಇವಿಎಂ)ವನ್ನು ತಿರುಚಲು ಸಾಧ್ಯವಿಲ್ಲ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಇವಿಎಂ ತಿರುಚಲು ಸಾಧ್ಯವಿಲ್ಲ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆ ಇಲ್ಲ: ಚುನಾವಣಾ ಆಯುಕ್ತ ಆರೋರಾ
ಸುನೀಲ್ ಆರೋರಾ
Published On :

ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ವನ್ನು ತಿರುಚಲು ಸಾಧ್ಯವಿಲ್ಲ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಉಪಯೋಗಿಸುವ ಪ್ರಶ್ನೆಯೇ ಬರುವುದಿಲ್ಲ ಎಂದರು. ಇವಿಎಂಗಳ ಬಗ್ಗೆ ದೇಶದಲ್ಲಿ ಬಹಳ ದೊಡ್ಡ ಮಟ್ಟದ ಚರ್ಚೆ, ವಿವಾದ ದೊಡ್ಡಮಟ್ಟದಲ್ಲಿ  ಪ್ರಾರಂಭವಾಗಿರುವಾಗಲೇ ಅವರು ಈ ಸ್ಪಷ್ಟಣೆ ನೀಡಿದ್ದಾರೆ. 

ಮುಂಬರುವ ದಿನಗಳಲ್ಲಿ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಜತೆ ವಿವಿಧ ಚುನಾವಣಾ ಸುಧಾರಣೆ ಮತ್ತು ನೀತಿ ಸಂಹಿತೆ ಕುರಿತು ಚರ್ಚೆ ನಡೆಸಲಿದೆ ಎಂದು ಇಲ್ಲಿ ಹೇಳಿದರು. ದೆಹಲಿಯಲ್ಲಿ ಖಾಸಗಿ ವಾಹಿನಿ ಏರ್ಪಡಿಸಿದ್ದ ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ಇವಿಎಂ ಅನ್ನು ಕಾರು ಅಥವಾ ಪೆನ್ನಿನ ರೀತಿ ಬೇಕಾದಂತೆ ತಿರುಚಲು ಆಗದು ಸಾಧ್ಯವೂ ಇಲ್ಲ.
 
ಹಾಲಿ ಇರುವ ಇವಿಎಂಗಳನ್ನು ಇನ್ನು ಮುಂದಿನ 20 ವರ್ಷಗಳ ಕಾಲ ಉಪಯೋಗ ಮಾಡಬಹುದಾಗಿದೆ ಅಲ್ಲದೇ ಮತ್ತೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೂ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.