ರಾಜ್ಯಸಭೆ ಆಯ್ಕೆ ತಕರಾರು: 'ಸುಪ್ರೀಂ'ನಲ್ಲಿ ಕೇವಿಯೆಟ್ ಹಾಕಿದ ಜೈಶಂಕರ್
ಕಳೆದ ಜುಲೈನಲ್ಲಿ ಗುಜರಾತ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯೆಟ್ ಹಾಕಿದ್ದಾರೆ.

ನವದೆಹಲಿ: ಕಳೆದ ಜುಲೈನಲ್ಲಿ ಗುಜರಾತ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯೆಟ್ ಹಾಕಿದ್ದಾರೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಅವರು ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಬಹುದಾದ ಮನವಿಗಳ ಕುರಿತು ನ್ಯಾಯಾಲಯವು ಯಾವುದೇ ನಿರ್ದೇಶನಗಳನ್ನು ನೀಡುವ ಮೊದಲು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿದೆ.
ಡಾ.ಜೈಶಂಕರ್ ಅವರ ಚುನಾವಣೆ ಆಯ್ಕೆ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಗೌರವ್ ಪಾಂಡ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು 2020 ರ ಫೆಬ್ರವರಿ 4 ರಂದು ಗುಜರಾತ್ ಹೈಕೋರ್ಟ್ ವಜಾಗೊಳಿಸಿ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ತಿಳಿಸಿತ್ತು.
ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಸಭೆ ಸ್ಥಾನಗಳಿಗೆ ಪ್ರತ್ಯೇಕ ಮತದಾನ ನಡೆಸುವ ಆಯೋಗದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿ ಚುನಾವಣೆಗಳನ್ನು ಒಟ್ಟಾಗಿ ನಡೆಸಬೇಕೆಂದು ಮನವಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


