ಫೆ.16ರಂದು ಕೇಜ್ರಿವಾಲ್ ಪದಗ್ರಹಣ: ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಆಹ್ವಾನ
ಭಾರೀ ವಿಜಯದೊಂದಿಗೆ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್, ಈ ತಿಂಗಳ 16 ರಂದು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

ನವದೆಹಲಿ: ಭಾರೀ ವಿಜಯದೊಂದಿಗೆ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್, ಈ ತಿಂಗಳ 16 ರಂದು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಜ್ಯಪಾಲ ಅನಿಲ್ ಬೈಜಾಲ್ ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಿಶೇಷ ಆಹ್ವಾನ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ನಡುವೆ ಕೇಜ್ರಿವಾಲ್ ಅವರು 11.30ಕ್ಕೆ ದೆಹಲಿ ರಾಜ್ಯಪಾಲ ಅನಿಲ್ ಬೈಜಾಲ್ ಅವರನ್ನು ಭೇಟಿ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


