ಮಹಿಳಾ ಸುರಕ್ಷತೆ ವಿಚಾರವಾಗಿ ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
ಉತ್ತರ ಪ್ರದೇಶದಲ್ಲಿ ಮಹಿಳಾ ಸುರಕ್ಷತೆ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದಲ್ಲಿ ಮಹಿಳಾ ಸುರಕ್ಷತೆ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಪಿರೋಜಾಬಾದ್ ನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಂದೆಯನ್ನು ಹತ್ಯೆ ಮಾಡಲಾಗಿದೆ. ಸಿತಾಪುರದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ ಎಲ್ಲಿದೆ ಸರ್ಕಾರ ಎಂದು ಪ್ರಶ್ನಿಸಿರುವ ಪ್ರಿಯಾಂಕಾ, ಬಿಜೆಪಿ ಸರ್ಕಾರದ ಅಡಿಯಲ್ಲಿ ಮಹಿಳೆಯರ ಮೇಲೆ ಅಪರಾಧಗಳು ಹೆಚ್ಚಾಗಿ ನಡೆಯುತ್ತಿವೆ ಆದರೆ, ಆದರೆ ಯಾರೂ ಕೂಡಾ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಟ್ವಿಟರ್ ನಲ್ಲಿ ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ.
ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ವಿಳಂಬ, ಭತ್ತ ಖರೀದಿಯಲ್ಲಿ ನಿರ್ಲಕ್ಷ್ಯ, ಬುಂದೇಲ್ ಕಂಡದಲ್ಲಿ ರೈತರ ಆತ್ಮಹತ್ಯೆ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಪ್ರಿಯಾಂಕಾ ಗಾಂಧಿ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ಯುವಕರು ಹಾಗೂ ಯುವತಿಯರನ್ನು ಸಮಾನ ರೀತಿಯಲ್ಲಿ ನೋಡಲಾಗುತ್ತಿದೆ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


