ಕಾಶ್ಮೀರ ವಿಚಾರ: ಟರ್ಕಿ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ, ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು
ಕಾಶ್ಮೀರ ವಿಚಾರ ಕುರಿತಂತೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. ಭಾರತದ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು ನೀಡಿದೆ.

ನವದೆಹಲಿ: ಕಾಶ್ಮೀರ ವಿಚಾರ ಕುರಿತಂತೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. ಭಾರತದ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು ನೀಡಿದೆ.
ಜಮ್ಮು-ಕಾಶ್ಮೀರ ಕುರಿತು ಟರ್ಕಿ ಅಧ್ಯಕ್ಷರು ನೀಡಿರುವ ಎಲ್ಲಾ ಹೇಳಿಕೆಗಳನ್ನು ಭಾರತ ತಿರಸ್ಕರಿಸಿದೆ. ಈ ಪ್ರದೇಶ ಭಾರತದ ಅವಿಭಾಜ್ಯ ಹಾಗೂ ನಾಶಪಡಿಸಲಾಗದ ಭಾಗವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಪಾಕಿಸ್ತಾನ ಸಂಸತ್ತಿನಲ್ಲಿ ಶುಕ್ರವಾರ ಮಾತನಾಡಿದ ಟರ್ಕಿ ಅಧ್ಯಕ್ಷ ಎರ್ಡೋಗನ್, ಮೊದಲನೆಯ ಮಹಾಯುದ್ಧದ ಸಮಯದಲ್ಲಿ ವಿದೇಶಿ ಪ್ರಾಬಲ್ಯದ ವಿರುದ್ಧ ಟರ್ಕಿಶ್ ಜನರು ನಡೆಸಿದ ಹೋರಾಟದೊಂದಿಗೆ ಕಾಶ್ಮೀರಿ ಜನರ ಹೋರಾಟ ವನ್ನು ಹೋಲಿಕೆ ಮಾಡಿದ್ದರು.
"ಪಾಕಿಸ್ತಾನದಿಂದ ಭಾರತದ ಮೇಲೆ ಉಂಟಾಗುತ್ತಿರುವ ಭಯೋತ್ಪಾದನೆ ಬೆದರಿಕೆ ಮತ್ತಿತರ ನೈಜ ಅಂಶಗಳನ್ನು ಅರ್ಥಮಾಡಿಕೊಳ್ಳದೆ ಭಾರತದ ಆಂತರಿಕ ವ್ಯವಹಾರದಲ್ಲಿ ತಲೆ ಹಾಕದಂತೆ ಟರ್ಕಿ ನಾಯಕರಿಗೆ ಹೇಳಲು ಬಯಸುತ್ತೇವೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


