ಕಂಬಳದ ಮೋಡಿಗಾರ ಶ್ರೀನಿವಾಸ್ ಗೌಡರ ಬೆನ್ನು ತಟ್ಟಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಕಂಬಳ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿ ದೇಶದ ಗಮನ ಸೆಳೆದಿರುವ ಕರ್ನಾಟಕದ ಶ್ರೀನಿವಾಸ್ ಗೌಡ ಅವರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕಂಬಳ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿ ದೇಶದ ಗಮನ ಸೆಳೆದಿರುವ ಕರ್ನಾಟಕದ ಶ್ರೀನಿವಾಸ್ ಗೌಡ ಅವರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉಪರಾಷ್ಟ್ರಪತಿಗಳ ಅಧಿಕೃತ ಟ್ವೀಟ್ ಖಾತೆಯಿಂದ ಬರೆದಿರುವ ವೆಂಕಯ್ಯ ನಾಯ್ಡು, ಕಂಬಳ ಕ್ರೀಡೆಯಲ್ಲಿ ಅಪರೂಪದ ಸಾಧನೆ ಮಾಡಿರುವ ಹಾಗೂ ಉಸೇನ್ ಬೋಲ್ಟ್ ಅವರ ಸಾಧನೆಯೊಂದಿಗೆ ಹೋಲಿಕೆಯಾಗುತ್ತಿರುವ ಶ್ರೀನಿವಾಸ್ ಗೌಡ ಅವರಿಗೆ ಅಭಿನಂದನೆಗಳು. ದೇಶದಲ್ಲಿ ಸುಪ್ತವಾಗಿರುವ ಹಲವಾರು ಪ್ರತಿಭೆಗಳಿವೆ. ಅದನ್ನು ಗುರುತಿಸಿ, ಪೋಷಿಸಿ ಸಂಪೂರ್ಣವಾದ ಸಾಮರ್ಥ್ಯವನ್ನು ಹೊರತರುವ ಅಗತ್ಯವಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


