ಋತುಸ್ರಾವದ ಕುರಿತು ವಿದ್ಯಾರ್ಥಿನಿಯರ ಒಳಒಡುಪು ಪರೀಕ್ಷಿಸಿದ್ದ ಕಾಲೇಜು ಪ್ರಾಂಶುಪಾಲರ ಅಮಾನತು!
ಕಾಲೇಜಿಗೆ ಬರುವ ವಿದ್ಯಾರ್ಥಿನಿಯರ ಋತುಸ್ರಾವದ ಕುರಿತು ಒಳಉಡುಪು ಪರೀಕ್ಷೆ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

ಅಹ್ಮದಾಬಾದ್: ಕಾಲೇಜಿಗೆ ಬರುವ ವಿದ್ಯಾರ್ಥಿನಿಯರ ಋತುಸ್ರಾವದ ಕುರಿತು ಒಳಉಡುಪು ಪರೀಕ್ಷೆ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.
ಋತುಸ್ರಾವವಾಗಿಲ್ಲ ಎಂದು ಖಚಿತಪಡಿಸಲು ಸುಮಾರು 60 ವಿದ್ಯಾರ್ಥಿನಿಯರ ಒಳಉಡುಪುಗಳನ್ನು ಶಿಕ್ಷಕರು ಬಲವಂತವಾಗಿ ತೆಗೆಸಿ ಪರೀಕ್ಷೆ ನಡೆಸಿದ್ದ ಅಮಾನವೀಯ ಘಟನೆ ಗುಜರಾತ್ ನ ಭುಜ್ ಎಂಬಲ್ಲಿನ ಶ್ರೀ ಸಹಜಾನಂದ ಮಹಿಳಾ ಕಾಲೇಜಿನಲ್ಲಿ ನಡೆದಿತ್ತು. ಕೆಲ ವಿದ್ಯಾರ್ಥಿನಿಯರು ತಮ್ಮ ಮಾಸಿಕ ದಿನಗಳಂದು ಧಾರ್ಮಿಕ ಕಟ್ಟಳೆಗಳನ್ನು ಉಲ್ಲಂಘಿಸುತ್ತಿದ್ದಾರೆಂದು ಹಾಸ್ಟೆಲ್ ಮುಖ್ಯಸ್ಥರು ಪ್ರಾಂಶುಪಾಲರಿಗೆ ದೂರಿದ ನಂತರ ಇಂತಹ ಒಂದು ವಿಪರೀತದ ಕ್ರಮ ಕೈಗೊಳ್ಳಲಾಗಿತ್ತು.
ಈ ಕುರಿತಂತೆ ವಿದ್ಯಾರ್ಥಿನಿಯರ ಪೋಷಕರು ದೂರು ನೀಡಿದ ಬೆನ್ನಲ್ಲೇ ಈ ಸುದ್ದಿ ವ್ಯಾಪಕವಾಗಿ ಹಬ್ಬಿ ಕಾಲೇಜಿನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಕಾಲೇಜಿನ ಪ್ರಾಂಶುಪಾಲರಾದ ರೀಟಾ ರಾಣಿಂಗರನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಕಾಲೇಜು ಆಡಳಿತ ಮಂಡಳಿ ವಿರುದ್ಧ ಐಪಿಸಿ ಸೆಕ್ಷನ್ 384, 355 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


