ದೇಶ

ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ 'ಉಪವಾಸ ಪ್ರತಿಭಟನೆ' 

ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ದಿನಗಣನೆ ಎದುರಿಸುತ್ತಿರುವ ಆರೋಪಿಗಳಲ್ಲಿ ಒಬ್ಬನಾದ ಆರೋಪಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಉಪವಾಸ ಮುಷ್ಕರಕ್ಕೆ ಕುಳಿತಿದ್ದಾನೆ ಎಂದು ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದ್ರ ರಾಣ ಮಾಹಿತಿ ನೀಡಿದ್ದಾರೆ.

ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ 'ಉಪವಾಸ ಪ್ರತಿಭಟನೆ' 
ಆರೋಪಿ ವಿನಯ್ ಶರ್ಮಾ
Published On :

ನವದೆಹಲಿ:ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ದಿನಗಣನೆ ಎದುರಿಸುತ್ತಿರುವ ಆರೋಪಿಗಳಲ್ಲಿ ಒಬ್ಬನಾದ ಮುಕೇಶ್ ಕುಮಾರ್ ಸಿಂಗ್  ತಮ್ಮ ಪರ ವಕೀಲ ವೃಂದಾ ಗ್ರೋವರ್  ವಕಾಲತ್ತು ವಹಿಸುವುದು ಬೇಡ ಎಂದು ನ್ಯಾಯಾಲಯದಲ್ಲಿ ಇಂದು ಹೇಳಿದ್ದಾನೆ. ಇದರಿಂದಾಗಿ ಇದೀಗ ಮುಕೇಶ್ ಸಿಂಗ್ ಗೆ ವಕೀಲ ರವಿ ಕ್ವಾಜಿ ಅವರನ್ನು ನ್ಯಾಯಾಲಯ ನೇಮಕ ಮಾಡಿದೆ.

ಮತ್ತೋರ್ವ ಆರೋಪಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಉಪವಾಸ ಮುಷ್ಕರಕ್ಕೆ ಕುಳಿತಿದ್ದಾನೆ ಎಂದು ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದ್ರ ರಾಣ ಮಾಹಿತಿ ನೀಡಿದ್ದಾರೆ.

ಅಪರಾಧಿಗಳನ್ನು ಗಲ್ಲಿಗೇರಿಸಲು ಹೊಸದಾಗಿ ದಿನಾಂಕ ನಿಗದಿಪಡಿಸುವಂತೆ ವಿಚಾರಣಾ ನ್ಯಾಯಾಲಯವನ್ನು ಕೋರಲು ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದ ನಂತರ ನಾಲ್ವರು ಆರೋಪಿಗಳಿಗೆ ಹೊಸದಾಗಿ ಡೆತ್ ವಾರೆಂಟ್ ಹೊರಡಿಸುವಂತೆ ನಿರ್ಭಯ ಪೋಷಕರು ಹಾಗೂ ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಇಂದು ನಡೆಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.