ನಿರ್ಭಯಾ ಪ್ರಕರಣ: ಮಾನಸಿಕ ರೋಗಿಯಾದ ಅಪರಾಧಿ! ಸ್ಕಿಜೋಫ್ರೇನಿಯಾ ಚಿಕಿತ್ಸೆಗಾಗಿ ಕೋರ್ಟಿಗೆ ಮೊರೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಪೈಕಿ ಒಬ್ಬನಾದ ವಿನಯ್ ಕುಮಾರ್ ಶರ್ಮಾ ಮಾನಸಿಕ ಅಸ್ವಸ್ಥತೆ, ಸ್ಕಿಜೋಫ್ರೇನಿಯಾ ಮತ್ತು ತಲೆ ಮತ್ತು ತೋಳಿನ ಗಾಯದಿಂದ ಬಳಲುತ್ತಿದ್ದು ಆತನಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡಬೇಕೆಂದು ದೆಹಲಿ ನ್ಯಾಯಾಲಯ ಗುರುವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಹೇಳಿದೆ

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಪೈಕಿ ಒಬ್ಬನಾದ ವಿನಯ್ ಕುಮಾರ್ ಶರ್ಮಾ ಮಾನಸಿಕ ಅಸ್ವಸ್ಥತೆ, ಸ್ಕಿಜೋಫ್ರೇನಿಯಾ ಮತ್ತು ತಲೆ ಮತ್ತು ತೋಳಿನ ಗಾಯದಿಂದ ಬಳಲುತ್ತಿದ್ದು ಆತನಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡಬೇಕೆಂದು ದೆಹಲಿ ನ್ಯಾಯಾಲಯ ಗುರುವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಹೇಳಿದೆ.
ವಿನಯ್ ಕುಮಾರ್ ಶರ್ಮಾ ಮನವಿಗೆ ಶನಿವಾರದೊಳಗೆ ಉತ್ತರಿಸುವಂತೆ ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜೈಲು ಅಧಿಕಾರಿಗಳು ಹೇಳುವಂತೆ ವಿನಯ್ ಶರ್ಮಾ ಜೈಲಿನಲ್ಲಿರುವ ತನ್ನ ಕೋಣೆಯ ಗೋಡೆಗೆ ತಲೆ ಬಡಿದುಕೊಂಡು ಗಾಯ ಮಾಡಿಕೊಂಡಿದ್ದಾನೆ.
ಭಾನುವಾರ ಮಧ್ಯಾಹ್ನ ಜೈಲು ಸಂಖ್ಯೆ 3 ರಲ್ಲಿ ಈ ಘಟನೆ ನಡೆದಿದ್ದು ಆತನಿಗೆ ಣ್ಣಪುಟ್ಟ ಗಾಯಗಳಾಗಿವೆ ಮತ್ತು ಜೈಲಿನ ಆವರಣದೊಳಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆದರೆ ವಿನಯ್ ಮಾನಸಿಕ ಅಸ್ವಸ್ಥತೆ, ಸ್ಕಿಜೋಫ್ರೇನಿಯಾ ಮತ್ತು ತಲೆ ಗಾಯಕ್ಕೆ ಉತ್ತಮ ಚಿಕಿತ್ಸೆ ಕೋರಿ ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ. ಅಪರಾಧಿ ತನ್ನ ತಾಯಿ ಸೇರಿದಂತೆ ಜನರನ್ನು ಗುರುತಿಸಲು ವಿಫಲವಾಗಿದ್ದಾನೆ ಎಂದು ಶರ್ಮಾ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಅಪರಾಧಿ ಮನವಿಗೆ ನ್ಯಾಯಾಲಯ ತಿಹಾರ್ ಜೈಲಿನ ಪ್ರತಿಕ್ರಿಯೆ ಕೋರಿದೆ. ಶನಿವಾರ ಉತ್ತರವನ್ನು ಸಲ್ಲಿಸುವಂತೆ ನಿರ್ದೇಶಿಸುತ್ತದೆ.
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆಗೆ ನ್ಯಾಯಾಲಯವು ಫೆಬ್ರವರಿ 17 ರಂದು ಹೊಸ ಡೆತ್ ವಾರಂಟ್ ಹೊರಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


