ಮುಂದಿನ ತಿಂಗಳು ಎಲ್ ಪಿ ಜಿ ಬೆಲೆ ಇಳಿಕೆ - ಪ್ರಧಾನ್ ಸುಳಿವು
ಮುಂದಿನ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಲಿದೆ ಎಂಬ ಸುಳಿವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಸಚಿವ ಧರ್ಮೇಂದ್ರ ಪ್ರಧಾನ್ ವ್ಯಕ್ತಪಡಿಸಿದ್ದಾರೆ

ರಾಂಚಿ: ಮುಂದಿನ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಲಿದೆ ಎಂಬ ಸುಳಿವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಸಚಿವ ಧರ್ಮೇಂದ್ರ ಪ್ರಧಾನ್ ವ್ಯಕ್ತಪಡಿಸಿದ್ದಾರೆ
ಜಾರ್ಖಂಡ್ ಪ್ರವಾಸದಲ್ಲಿರುವ ಅವರು ಇಲ್ಲಿನ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಎಲ್‌ಪಿಜಿ ಸಿಲಿಂಡರ್ ಬೆಲೆಗಳ ನಿರಂತರ ಏರಿಕೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಪ್ರಧಾನ್, ಎಲ್‌ಪಿಜಿ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ ಎಂಬುದು ವಾಸ್ತವಿಕವಾಗಿ ನಿಜವಲ್ಲ. ಈ ತಿಂಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಾರಣ ದರ ಹೆಚ್ಚಾಗಿದೆ ಆದರೆ ಮುಂದಿನ ದಿನಗಳಲ್ಲಿ ಬೆಲೆಗಳು ಖಂಡಿತವಾಗಿ ಕಡೆಮೆಯಾಗಲಿದೆ ಎಂಬ ಸುಳಿವು ನೀಡಿದರು.
ಚಳಿಗಾಲದಲ್ಲಿ, ಎಲ್ಪಿಜಿ ಬಳಕೆ ಹೆಚ್ಚಾಗುತ್ತದೆ, ಇದು ವಲಯದ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಈ ತಿಂಗಳು ಬೆಲೆ ಏರಿಕೆಯಾದರೆ ಮುಂದಿನ ತಿಂಗಳು ಕಡಿಮೆಯಾಗಲಿದೆ ಎಂದರು.
ಕಳೆದ ವಾರ, ಅಡುಗೆ ಅನಿಲ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 144.ರೂಪಾಯಿ ಏರಿಸಲಾಗಿತ್ತು ಇದಕ್ಕೆ ಸಾರ್ವಜನಿಕ ವಲಯದಲ್ಲೂ ಭಾರಿ ಆಕ್ರೋಶ ಸಹ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


