ತಮಿಳುನಾಡಿನಲ್ಲಿ ಎರಡು ಓಮ್ನಿ ಬಸ್‌ಗಳ ಡಿಕ್ಕಿ: ನೇಪಾಳದ ಆರು ಪ್ರವಾಸಿಗರು ಸಾವು, 28 ಮಂದಿಗೆ ಗಾಯ
ತಮಿಳುನಾಡಿನ ಸೇಲಂ ಜಿಲ್ಲೆಯ ಒಮಲೂರು ಬಳಿಯ ನಾರಿಪಲ್ಲಂನಲ್ಲಿ ಕಳೆದ ಮಧ್ಯರಾತ್ರಿ ಎರಡು ಓಮ್ನಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ನೇಪಾಳದ ಆರು ಪ್ರವಾಸಿಗರು ಮೃತಪಟ್ಟಿದ್ದು, ಇತರ 28 ಮಂದಿ ಗಾಯಗೊಂಡಿದ್ದಾರೆ.

ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯ ಒಮಲೂರು ಬಳಿಯ ನಾರಿಪಲ್ಲಂನಲ್ಲಿ ಕಳೆದ ಮಧ್ಯರಾತ್ರಿ ಎರಡು ಓಮ್ನಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ನೇಪಾಳದ ಆರು ಪ್ರವಾಸಿಗರು ಮೃತಪಟ್ಟಿದ್ದು, ಇತರ 28 ಮಂದಿ ಗಾಯಗೊಂಡಿದ್ದಾರೆ.
ಕಠ್ಮಂಡುವಿನಿಂದ 34 ಪ್ರವಾಸಿಗರ ತಂಡ ಕನ್ಯಾಕುಮಾರಿಗೆ ಭೇಟಿ ನೀಡಿದ ನಂತರ ಓಮ್ನಿ ಬಸ್‌ನಲ್ಲಿ ರಾಜಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಪಾಳ ಪ್ರವಾಸಿಗರು ರಾತ್ರಿಯಿಡೀ ದೇವಾಲಯದ ಹಾಲ್ ನಲ್ಲಿ ವಿಶ್ರಾಂತಿ ಪಡೆದು ಗುರುವಾರ ಬೆಳಿಗ್ಗೆ ಪ್ರಯಾಣ ಮುಂದುವರಿಸಲು ನಿರ್ಧರಿಸಿದ್ದರು.
ನೇಪಾಳದ ಪ್ರವಾಸಿಗರಿದ್ದ ಓಮ್ನಿ ಬಸ್‌ನ ಚಾಲಕ ಮತ್ತೊಂದು ಓಮ್ನಿ ಬಸ್ ಲೇನ್‌ನಲ್ಲಿ ಸಮೀಪಿಸುತ್ತಿರುವುದನ್ನು ಗಮನಿಸದೆ ರಸ್ತೆಯ ಇನ್ನೊಂದು ಲೇನ್‌ಗೆ ವಾಹನವನ್ನು ತಿರುಗಿಸಿದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ ತಿರುವನಂತಪುರಂಗೆ ತೆರಳುತ್ತಿದ್ದ ಮತ್ತೊಂದು ಓಮ್ನಿ ಬಸ್ ಗೆ ನೇಪಾಳದ ಪ್ರವಾಸಿ ಓಮ್ನಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸೇರಿದಂತೆ ಆರು ನೇಪಾಳ ಪ್ರಜೆಗಳು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


