100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಹೇಳಿಕೆ: ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲು
ಮುಸ್ಲಿಮರ ಜನಸಂಖ್ಯೆ ದೇಶದಲ್ಲಿ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲಾಗಿದೆ.

ಮುಂಬೈ: ಮುಸ್ಲಿಮರ ಜನಸಂಖ್ಯೆ ದೇಶದಲ್ಲಿ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲಾಗಿದೆ.
ವಾರಿಸ್ ವಿರುದ್ಧ ಬಿಜೆಪಿ ಯುವ ಸಂಘದ ನಾಯಕ ಪಾರಿಸ್ಮಾಲ್ ದೇಶಪಾಂಡೆ ಮುಂಬೈನ ಡೆಕ್ಕನ್ ಜಿಮ್ಖಾನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿರುವ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪಠಾಣ್ ಅವರ ಹೇಳಿಕೆಯಿಂದ ಎರಡು ಸಮುದಾಯಗಳ ವಾತಾವರಣ ಹದಗೆಡಲಿದೆ. ಹೀಗಾಗಿ ಅವರ ವಿರುದ್ಧ ಐಪಿಸಿ ಸೆಕ್ಷನ್ 123ಎ, 295 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


