ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್
ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ.

ನವದೆಹಲಿ: ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ.
ಅಂತರಾಷ್ಟ್ರೀಯ ನ್ಯಾಯಾಂಗ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ತಾವು ಸಾಮಾಜಿಕ ಮಾಧ್ಯಮದ ಪ್ರಬಲ ಬೆಂಬಲಿಗ ಆದರೆ, ಕೆಲವರು ತಮ್ಮಸ್ವಾರ್ಥ ಸಾಧನೆಗೆ ಅದನ್ನು ದುರುಪಯೋಗಪಡಿಸಿಕೊಂಡಾಗ ತೀವ್ರ ಬೇಸರಗೊಂಡಿದ್ದೇನೆ ಎಂದರು. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸುವ ಪ್ರವೃತ್ತಿ ಹೆಚ್ಚುತ್ತಿರುವುದು "ಅಪಾಯಕಾರಿ" ಬೆಳವಣಿಗೆ ಎಂದು ಬಣ್ಣಿಸಿದರು. ಈ ವಿಷಯದಲ್ಲಿ ನ್ಯಾಯಮೂರ್ತಿಗಳು ಸೂಕ್ತ ನಿರ್ಧಾರ ಕೈಗೊಳ್ಳಲು ಸಂಪೂರ್ಣ ಸ್ವತಂತ್ರರು ಎಂದು ಕಾನೂನು ಸಚಿವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


