ಗುಜರಾತ್ ನಲ್ಲಿ ಏನಾಗಿತ್ತು ಅಂತ ವಾರಿಸ್ ಪಠಾಣ್ ನೆನಪಿಸಿಕೊಳ್ಳಲಿ: ಬಿಜೆಪಿ ಎಂಎಲ್ ಸಿ
ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ಗಿರಿಶ್ ವ್ಯಾಸ್ ಅವರು, ಗುಜರಾತ್ ನಲ್ಲಿ ಏನಾಗಿತ್ತು ಎಂಬುದನ್ನು ಸ್ವಲ್ಪ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ನಾಗ್ಪುರ್: ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ಗಿರಿಶ್ ವ್ಯಾಸ್ ಅವರು, ಗುಜರಾತ್ ನಲ್ಲಿ ಏನಾಗಿತ್ತು ಎಂಬುದನ್ನು ಸ್ವಲ್ಪ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿಯ ಪ್ರತಿ ಕಾರ್ಯಕರ್ತರು, ಯುವಕರು ಮತ್ತು ದೇಶ ಪ್ರೇಮಿಗಳು ವಾರಿಸ್ ಪಠಾಣ್ ಅವರಿಗೆ ಅವರದ್ದೇ ಭಾಷೆಯಲ್ಲಿ ಉತ್ತರ ನೀಡಬೇಕು ಎಂದಿರುವ ಬಿಜೆಪಿ ನಾಯಕ, ಮುಸ್ಲಿಂ ಸಮುದಾಯ ಇಂತಹ ನಾಯಕರನ್ನು ಬಹಿಷ್ಕರಿಸಬೇಕು ಮತ್ತು ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ್ದಾರೆ.
ನಾವು ಸಹಿಷ್ಣುಗಳು ಮತ್ತು ತಾಳ್ಮೆ ಹೊಂದಿರುವವರು. ಅದರ ಅರ್ಥ ನಾವು ಅಸಮರ್ಥರು ಅಂತ ಅಲ್ಲ. ಗುಜರಾತ್ ನಲ್ಲಿ ಏನು ನಡೆದಿತ್ತು ಎಂಬುದನ್ನು ನೆನಪಿಸಿಕೊಳ್ಳಲಿದೆ ಎಂದು ವ್ಯಾಸ್ ಅವರು 2002ರ ಗೋದ್ರಾ ಹತ್ಯಾಖಂಡವನ್ನು ಉಲ್ಲೇಖಿಸಿದ್ದಾರೆ. ಗೋದ್ರಾ ದಂಗೆಯಲ್ಲಿ 1 ಸಾವಿರಕ್ಕೂ ಹೆಚ್ಚು ಅಲ್ಪ ಸಂಖ್ಯಾತರು ಮೃತಪಟ್ಟಿದ್ದರು.
ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಾರಿಸ್ ಪಠಾಣ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಗಿರಿಶ್ ವ್ಯಾಸ್ ಅವರು ಒತ್ತಾಯಿಸಿದ್ದಾರೆ.
ಕಳೆದ ಫೆಬ್ರವರಿ 16ರಂದು ಕಲಬುರಗಿಯಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಮಾತನಾಡಿದ್ದ ಪಠಾಣ್, ನಾವು ಎಲ್ಲರೂ ಒಟ್ಟಿಗೆ ಹೋಗಬೇಕು. ನಮಗೂ ಸ್ವಾತಂತ್ರ್ಯ ಬೇಕು. ಆದರೆ ಇದನ್ನು ಕೇಳಿ ಪಡೆಯಲು ಸಾಧ್ಯವಿಲ್ಲ. ಇವುಗಳನ್ನು ನಾವು ಬಲವಂತದಿಂದ ಪಡೆಯುವ ಸ್ಥಿತಿ ಬಂದಿದೆ. ನೆನಪಿಡಿ, ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


