ಭಾರತ ಭೇಟಿಗೆ ಉತ್ಸುಕನಾಗಿದ್ದು, ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನೂ ಭೇಟಿಯಾಗುತ್ತೇನೆ: ಹಿಂದಿಯಲ್ಲಿ ಟ್ರಂಪ್ ಟ್ವೀಟ್
ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭಾರತ ಭೇಟಿಗೆ ಉತ್ಸುಕನಾಗಿದ್ದೇನೆ. ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನು ಭೇಟಿ ಮಾಡಲಿದ್ದೇನೆಂದು ಹೇಳಿದ್ದಾರೆ.

ನವದೆಹಲಿ: ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭಾರತ ಭೇಟಿಗೆ ಉತ್ಸುಕನಾಗಿದ್ದೇನೆ. ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನು ಭೇಟಿ ಮಾಡಲಿದ್ದೇನೆಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಭಾರತ ಭೇಟಿಗೆ ಉತ್ಸುಕನಾಗಿದ್ದೇನೆ. ಪ್ರಸ್ತುತ ಹಾದಿಯಲ್ಲಿದ್ದು, ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನು ಭೇಟಿಯಾಗಲಿದ್ದೇವೆಂದು ಹಿಂದಿಯಲ್ಲಿ ಹೇಳಿದ್ದಾರೆ.
ಭಾರತಕ್ಕೆ ಆಗಮಿಸುವ ಟ್ರಂಪ್ ಅವರು, ಮೊದಲಿಗೆ ಗುಜರಾತಿನ ಅಹಮದಾಬ್ ನಲ್ಲಿ ನಡೆಯಲಿರುವ ಬರೋಬ್ಬರಿ 22 ಕಿ.ಮೀ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಈವೇಳೆ 28 ವೇದಿಕೆಗಳಲ್ಲಿ ಟ್ರಂಪ್ ಅವರಿಗೆ ಭಾರತದ ಶ್ರೀಮಂತ ಸಂಸ್ಕೃತಿಯನ್ನು ದರ್ಶನ ಮಾಡಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆ ತಾಜ್ ಮಹಲ್ ಭೇಟಿಗೆ ಟ್ರಂಪ್ ಹಾದುಹೋಗುವ ಮಾರ್ಗದುದ್ದಕ್ಕೂ 3000 ಕಲಾವಿದರು ನೃತ್ಯ ಪ್ರದರ್ಶಿಸಿ ಸ್ವಾಗತ ಕೋರಲಿದ್ದಾರೆ.
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಮೊಟೆರಾ ಕ್ರೀಡಾಂಗಣದವರೆಗೆ ಟ್ರಂಪ್ ಅವರು ರೋಡ್ ಶೋ ನಡೆಸಲಿದ್ದಾರೆ. ಅಲ್ಲಲ್ಲಿ 28 ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, ದೇಶದ ವಿವಿಧ ಭಾಗಗಳ ಕಲಾವಿದರು ಪ್ರದರ್ಶನ ನೀಡಲಿದ್ದಾರೆ.
ಇನ್ನು ಸಂಜೆ ಆಗ್ರಾಗೆ ಭೇಟಿ ನೀಡಲಿರುವ ಟ್ರಂಪ್ ಅವರು, ವಿಮಾನ ನಿಲ್ದಾಣದಿಂದ ತಾಜ್ ಮಹಲ್ ವರೆಗೆ ಸಾಗುವ 10 ಕಿ.ಮೀ ಉದ್ದದ ಹೆದ್ದಾರಿವರೆಗೂ 16 ಸಾವಿರ ಹೂಕುಂಡಗಳನ್ನು ಇಡಲಾಗಿದೆ. ಮಕ್ಕಳು 60 ಸಾವಿರ ಭಾರತ-ಅಮೆರಿಕಾ ಧ್ವಜವನ್ನು ಬೀಸಲಿದ್ದಾರೆ. 21 ಕಡೆ 3000 ನೃತ್ಯಗಾರರು ಪ್ರದರ್ಶನ ನೀಡಲಿದ್ದಾರೆ. 8 ನಿಮಿಷಗಳ ಪ್ರಯಾಣ ಅವಧಿಯಲ್ಲಿ ಈ ಎಲ್ಲವನ್ನೂ ಟ್ರಂಪ್ ಕಣ್ತುಂಬಿಕೊಳ್ಳಲಿದ್ದಾರೆ.
ಈ ನಡುವೆ ಟ್ರಂಪ್ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಟ್ವೀಟ್ ಮಾಡಿದ್ದು, ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿದ್ದೇವೆ. ಸೋಮವಾರ ಅವರು ನಮ್ಮ ಜೊತೆಗಿರುತ್ತಾರೆ ಎಂಬುದು ನಮಗೆ ಗೌರವದ ವಿಚಾರ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


