ತಮಿಳುನಾಡು; ಜಯಲಲಿತಾ ಜನ್ಮದಿನ ನವಜಾತ ಶಿಶುಗಳಿಗೆ ಚಿನ್ನ ಉಂಗುರಗಳ ಉಡುಗೊರೆ!
ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಜನಿಸಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಕೊಡುಗೆಯಾಗಿ ನೀಡಲಾಗಿದೆ.

ಚೆನ್ನೈ: ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಜನಿಸಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಕೊಡುಗೆಯಾಗಿ ನೀಡಲಾಗಿದೆ.
ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ 72 ನೇ ಜನ್ಮ ದಿನವಾದ ಇಂದು ರಾಯಪುರಂ ಆರ್‌ಎಸ್‌ಆರ್‌ಎಂ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಶಿಶುಗಳಿಗೆ ರಾಜ್ಯ ಆರೋಗ್ಯ ಸಚಿವ ಡಿ.ಜಯಕುಮಾರ್ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದರು.
ಜಯಲಲಿತಾ ಜನ್ಮ ದಿನದ ಅಂಗವಾಗಿ ಎಐಎಡಿಎಂಕೆ ಪಕ್ಷ ಬಡವರಿಗೆ ನೆರವು ಕಲ್ಪಿಸುವ ಮತ್ತು ವೈದ್ಯಕೀಯ ಶಿಬಿರ ನಡೆಸಲು ತನ್ನ ಎಲ್ಲ ಕಾರ್ಯಕರ್ತರಿಗೆ ಕರೆ ನೀಡಿತ್ತು. ರಾಜ್ಯಾದ್ಯಂತ ಅನೇಕ ನಾಯಕರು ಹಾಗೂ ಕಾರ್ಯಕರ್ತರು ದಿ. ಜಯಲಲಿತಾ ಅವರಿಗೆ ಗೌರವ ನಮನ ಸಲ್ಲಿಸಿದರು. ಮುಖ್ಯ ಪಳನಿ ಸ್ವಾಮಿ ಉಪ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ರಾಜ್ಯ ಸಚಿವಾಲಯ ಬಳಿ ಇರುವ ದಿವಂಗತ ಜಯಲಲಿತಾ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. ಜಯಲಲಿತಾ ಅವರ ಜನ್ಮ ದಿನವಾದ ಫೆಬ್ರವರಿ 24 ರಂದು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ದಿನವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಇತ್ತೀಚೆಗೆ ವಿಧಾನಸಭೆಯಲ್ಲಿ ಘೋಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


