ಟ್ರಂಪ್ ಭೇಟಿಯಿಂದ ಅಮೆರಿಕ-ಭಾರತ ಸಂಬಂಧ ವೃದ್ಧಿ: ಪ್ರಧಾನಿ ಮೋದಿ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿ ಅಮೆರಿಕ ಮತ್ತು ಭಾರತದ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷರ ಭೇಟಿಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿ ಅಮೆರಿಕ ಮತ್ತು ಭಾರತದ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷರ ಭೇಟಿಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮೆರಿಕ ಅಧ್ಯಕ್ಷರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಿಮ್ಮ ಆಗಮನಕ್ಕಾಗಿ ಭಾರತ ಕಾಯುತ್ತಿದೆ @ ಪೊಟಸ್ @ ರಿಯಲ್ ಡೊನಾಲ್ಡ್ ಟ್ರಂಪ್! ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ. ಅಹಮದಾಬಾದ್‌ನಲ್ಲಿ ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ಸೋಮವಾರ ಅಹಮದಾಬಾದ್‌ಗೆ ಆಗಮಿಸುತ್ತಿದ್ದಾರೆ.
'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನಕ್ಕೆ ಭಾರತ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ, ಟ್ರಂಪ್ ಭೇಟಿ ಉಭಯ ದೇಶಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ. ಭಾರತ ನಿಮ್ಮ ಆಗಮನಕ್ಕಾಗಿ ಕಾಯುತ್ತಿದೆ! ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಯುಎಸ್ ಪ್ರಥಮ ಮಹಿಳೆ ಜೊತೆ ಭಾರತಕ್ಕೆ ತೆರಳುತ್ತಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ನೀಡಿದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ "ಅಹ್ಮದಾಬಾದ್ ನಲ್ಲಿ ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ" ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
Related Article
ಡೊನಾಲ್ಡ್ ಟ್ರಂಪ್ ಅವರ ಎರಡು ದಿನಗಳ ಭಾರತ ಭೇಟಿ: ಕಾರ್ಯಕ್ರಮ ವೇಳಾಪಟ್ಟಿ ಹೀಗಿದೆ
ಭಾರತ ಭೇಟಿಗೆ ಉತ್ಸುಕನಾಗಿದ್ದು, ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನೂ ಭೇಟಿಯಾಗುತ್ತೇನೆ: ಹಿಂದಿಯಲ್ಲಿ ಟ್ರಂಪ್ ಟ್ವೀಟ್
ತಮ್ಮ ಚುನಾವಣಾ ಪ್ರಚಾರಕ್ಕೆ ಟ್ರಂಪ್ ಭಾರತದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್
ಭಾರತಕ್ಕೆ ಅಮೆರಿಕಾ ದೊಡ್ಡ ವ್ಯಾಪಾರ ಪಾಲುದಾರ: 2ನೇ ಸ್ಥಾನಕ್ಕೆ ಕುಸಿದ ಚೀನಾ
ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕಾದ 7ನೇ ಅಧ್ಯಕ್ಷ ಟ್ರಂಪ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


