ದೇಶ

ಮಾಲೇಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ವಿಳಂಬಕ್ಕೆ ಕಾರಣ ಏನು?: ಎನ್ಐಎಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಪ್ರಮುಖ ಆರೋಪಿಯಾಗಿರುವ 2008ರ ಮಾಲೇಗಾಂವ್​ ಸ್ಫೋಟ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ 'ಯಾವುದೇ ಪರಿಣಾಮಕಾರಿ ಪ್ರಗತಿಯಾಗಿಲ್ಲ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ವಿಳಂಬಕ್ಕೆ ಕಾರಣ ಏನು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯನ್ನು ಪ್ರಶ್ನಿಸಿದೆ.

ಮಾಲೇಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ವಿಳಂಬಕ್ಕೆ ಕಾರಣ ಏನು?: ಎನ್ಐಎಗೆ ಬಾಂಬೆ ಹೈಕೋರ್ಟ್ ಪ್ರಶ್ನೆ
ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್
Published On :

ಮುಂಬೈ: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಪ್ರಮುಖ ಆರೋಪಿಯಾಗಿರುವ 2008ರ ಮಾಲೇಗಾಂವ್​ ಸ್ಫೋಟ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ 'ಯಾವುದೇ ಪರಿಣಾಮಕಾರಿ ಪ್ರಗತಿಯಾಗಿಲ್ಲ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ವಿಳಂಬಕ್ಕೆ ಕಾರಣ ಏನು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯನ್ನು ಪ್ರಶ್ನಿಸಿದೆ.

ಉದ್ದೇಶ ಪೂರ್ವಕವಾಗಿಯೇ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರಕರಣದ ಮತ್ತೊಬ್ಬ ಆರೋಪಿ ಸಮೀರ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿಪಿ ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಎನ್ ಆರ್ ಬೊರ್ಕರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಪ್ರಕರಣದ ವಿಳಂಬದ ಕುರಿತು ವಿವರಣೆ ನೀಡುವಂತೆ ಎನ್ಐಎಗೆ ಸೂಚಿಸಿದೆ.

20-18ರಲ್ಲಿ ಪ್ರಕರಣದ ವಿಚಾರಣೆಗಾಗಿ ಮುಂಬೈನಲ್ಲಿ ವಿಶೇಷ ಎನ್ಐಎ ಕೋರ್ಟ್ ಸ್ಥಾಪಿಸಲಾಗಿದ್ದರೂ ಸಹ ಕಳೆದ ಆರು ತಿಂಗಳಲ್ಲಿ ಕೇವಲ 14 ಸಾಕ್ಷ್ಯಗಳನ್ನು ಮಾತ್ರ ಪರಿಶೀಲಿಸಲಾಗಿದೆ ಎಂದು ಕುಲಕರ್ಣಿ ದೂರಿದ್ದಾರೆ.

2019ರ ಜನವರಿಯಲ್ಲಿ, ಯಾವುದೇ ಆರೋಪಿ ವಿಚಾರಣಾ ಕೋರ್ಟ್ ಗೆ ಸಹಕರಿಸದಿದ್ದರೆ ಅವರ ಬಗ್ಗೆ ಮುಚ್ಚಿದ ಕವರ್ ನಲ್ಲಿ ವರದಿ ನೀಡುವಂತೆ ಬಾಂಬೆ ಹೈಕೋರ್ಟ್ ಎನ್ಐಎ ಕೋರ್ಟ್ ಗೆ ಆದೇಶಿಸಿತ್ತು. ಆದರೂ ವಿಚಾರಣೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.