ರಾಷ್ಟ್ರಪತಿ ಭವನದಲ್ಲಿ ಟ್ರಂಪ್ ದಂಪತಿಗೆ ಸಾಂಪ್ರದಾಯಿಕ ಅದ್ಧೂರಿ ಸ್ವಾಗತ
ರಾಷ್ಟ್ರಪತಿ ಭವನದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಇಂದು ಸಾಂಪ್ರದಾಯಿಕ ಅದ್ಧೂರಿ ಸ್ವಾಗತ ನೀಡಲಾಯಿತು.

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಇಂದು ಸಾಂಪ್ರದಾಯಿಕ ಅದ್ಧೂರಿ ಸ್ವಾಗತ ನೀಡಲಾಯಿತು.
ಪ್ರಸಿದ್ಧ ದಿ ಬಿಯಾಸ್ ಕಾರಿನಲ್ಲಿ ಪತ್ನಿ ಮೆಲಾನಿಯಾ ಅವರೊಂದಿಗೆ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಟ್ರಂಪ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಅವರ ಪತ್ನಿ ಸವಿತಾ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಸ್ವಾಗತ ನೀಡಿದರು.
ರಾಷ್ಟ್ರಪತಿ ಭವನದ ಮುಂಭಾಗದ ಆವರಣದಲ್ಲಿ ಭೂ, ವಾಯು ಹಾಗೂ ನೌಕ ಸೇನಾ ಸಿಬ್ಬಂದಿಯಿಂದ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಡೊನಾಲ್ಡ್ ಟ್ರಂಪ್ ವಿವಿಧ ಸೇನಾ ತುಕಡಿಗಳ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಆರೋಗ್ಯ ಸಚಿವ ಹರ್ಷವರ್ಧನ್, ಹಾಗೂ ಸೇನಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಂತರ ಟ್ರಂಪ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿ ಇರುವ ಸ್ಥಳ ರಾಜ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


