ಸಿಎಎ ಹಿಂಸಾಚಾರ: ದೆಹಲಿಗೆ ಸೇನೆ ರವಾನಿಸಿ ಎಂದ ಸಿಎಂ ಕೇಜ್ರಿವಾಲ್, 20ಕ್ಕೇರಿದ ಸಾವಿನ ಸಂಖ್ಯೆ
ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷ ಮತ್ತು ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಲೇ ಸೇನೆಯನ್ನು ಕಾರ್ಯಾಚರಣೆಗೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷ ಮತ್ತು ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಲೇ ಸೇನೆಯನ್ನು ಕಾರ್ಯಾಚರಣೆಗೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪ್ರಮುಖವಾಗಿ ಹಿಂಸಾಚಾರದ ಕೇಂದ್ರ ಬಿಂದು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಸೇನೆಯನ್ನು ರವಾನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
‘ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಶಾಂತಿ–ಸುವ್ಯವಸ್ಥೆ ನೆಲೆಸುತ್ತಿಲ್ಲ. ಜನರಲ್ಲಿ ಭದ್ರತೆಯ ಭಾವನೆ ಮೂಡುತ್ತಿಲ್ಲ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ತಕ್ಷಣ ಕರ್ಫ್ಯೂ ಹೇರಬೇಕು ಮತ್ತು ದುಷ್ಕರ್ಮಿಗಳನ್ನು ಹತ್ತಿಕ್ಕಲು ಸೇನೆಯನ್ನು ನಿಯೋಜಿಸಬೇಕು ಎಂದು ಕೇಂದ್ರ ಗೃಹ ಸಚಿವರನ್ನು ವಿನಂತಿಸಿ ಪತ್ರ ಬರೆಯುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
20ಕ್ಕೇರಿದ ಸಾವಿನ ಸಂಖ್ಯೆ
ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ–ವಿರುದ್ಧದ ಪ್ರತಿಭಟನೆಯು ಕೋಮು ಸಂಘರ್ಷಕ್ಕೆ ತಿರುಗಿದ ಪರಿಣಾಮ ರಾಷ್ಟ್ರ ರಾಜಧಾನಿಯ ಈಶಾನ್ಯ ಭಾಗದ ಕೆಲವು ಭಾಗಗಳಲ್ಲಿ ಬುಧವಾರವೂ ಹಿಂಸಾಚಾರ ಮುಂದುವರಿದಿದೆ. ಹಿಂಸಾಚಾರಕ್ಕೆ ಮತ್ತೆ ಏಳು ಜನರು ಬಲಿಯಾಗಿದ್ದು, ಒಟ್ಟು ಮೃತಪಟ್ಟವರ 20ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


