ದೇಶ

ದೆಹಲಿ ಸಿಎಎ ರಕ್ತಪಾತ: ಹಿಂಸಾಚಾರ ಪ್ರಕರಣ ವಿಚಾರಣೆ ನಡೆಸಿದ ದೆಹಲಿ 'ಹೈ', ಗಾಯಾಳುಗಳ ಚಿಕಿತ್ಸೆಗೆ ಪೊಲೀಸರಿಗೆ ಸೂಚನೆ

ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ಮಂಗಳವಾರ ತಡರಾತ್ರಿ ವಿಚಾರಣೆ ನಡೆಸಿದ್ದು ಜನರಿಗೆ ರಕ್ಷಣೆ ಒದಗಿಸುವಂತೆ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ದೆಹಲಿ ಸಿಎಎ ರಕ್ತಪಾತ: ಹಿಂಸಾಚಾರ ಪ್ರಕರಣ ವಿಚಾರಣೆ ನಡೆಸಿದ ದೆಹಲಿ 'ಹೈ', ಗಾಯಾಳುಗಳ ಚಿಕಿತ್ಸೆಗೆ ಪೊಲೀಸರಿಗೆ ಸೂಚನೆ
ಸಂಗ್ರಹ ಚಿತ್ರ
Published On :

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ಮಂಗಳವಾರ ತಡರಾತ್ರಿ ವಿಚಾರಣೆ ನಡೆಸಿದ್ದು ಜನರಿಗೆ ರಕ್ಷಣೆ ಒದಗಿಸುವಂತೆ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ. 

ಪೌರತ್ವ ತಿದ್ದುಪಡಿ ಪರ-ವಿರೋಧವಾಗಿ ಈಶಾನ್ಯ ದೆಹಲಿಯಲ್ಲಿ ಶನಿವಾರ ಸಣ್ಣ ಪ್ರಮಾಧಲ್ಲಿ ಆರಂಭವಾಗಿ, ಭಾನುವಾರ-ಸೋಮವಾರಗಳಂದು ಹಿಂಸಾಚಾರ ರೂಪ ಪಡೆದುಕೊಂಡಿದ್ದ ಪ್ರತಿಭಟನೆ, ಮಂಗಳವಾರ ರಕ್ತಪಾತಕ್ಕೆ ಕಾರಣವಾಗಿತ್ತು. ಮಂಗಳವಾರ ಬೆಳಿಗ್ಗೆಯಿಂದಲೂ ಜಫ್ರಾಬಾದ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಹಿಂಸಾಚಾರ ನಡೆದು, 17 ಮಂದಿ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ 50 ಪೊಲೀಸರು ಸೇರಿದಂತೆ 180 ಮಂದಿ ಗಾಯಗೊಂಡಿದ್ದು, ಅವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಹಿಂಸಾಚಾರ ಹತ್ತಿಕ್ಕಲು ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಜಫ್ರಾಬಾದ್, ಮೌಜ್ ಪುರ, ಭಜನ್ ಪುರ ಚೌಕ್, ಚಾಂದ್ ಬಾಗ್, ಕರ್ವಾಲ್ ನಗರ್, ಖುರೇಜಿ ಖಾಸ್, ಬಾಬರ್ ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಈ ಹಿನ್ನೆಲೆಯಲ್ಲಿ ಹಿಂಸಾಚಾರ ಪ್ರಕರಣ ಕುರಿತು ಮಧ್ಯರಾತ್ರಿ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್, ಗಲಭೆಯಲ್ಲಿ ಗಾಯಗೊಂಡವರಿಗೆ ಕೂಡಲೇ ವೈದ್ಯಕೀಯ ನೆರವು ಒದಗಿಸಿ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.