ಬಾಲಾಕೋಟ್ ವಾಯುದಾಳಿಗೆ ವರ್ಷ; ಭಾರತ ರಕ್ಷಣೆಗೆ ಮತ್ತೆ ಗಡಿ ದಾಟಲು ಸಿದ್ದ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್
ಭಾರತೀಯ ವಾಯುಸೇನೆಯ ಶೌರ್ಯಕ್ಕೆ ಸಾಕ್ಷಿಯಾಗಿರುವ ಬಾಲಾಕೋಟ್ ವಾಯುದಾಳಿ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾರತದ ರಕ್ಷಣೆಗಾಗಿ ಮತ್ತೆ ಗಡಿದಾಟಲು ಸೇನೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಭಾರತೀಯ ವಾಯುಸೇನೆಯ ಶೌರ್ಯಕ್ಕೆ ಸಾಕ್ಷಿಯಾಗಿರುವ ಬಾಲಾಕೋಟ್ ವಾಯುದಾಳಿ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾರತದ ರಕ್ಷಣೆಗಾಗಿ ಮತ್ತೆ ಗಡಿದಾಟಲು ಸೇನೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅವರು, 'ಬಾಲಾಕೋಟ್ ದಾಳಿಗೆ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯೇ ಕಾರಣ. ಇದಕ್ಕಾಗಿ ನಾನು ಪ್ರಧಾನಿಯವರನ್ನು ಅಭಿನಂದಿಸುತ್ತೇನೆ. ದೇಶದ ರಕ್ಷಣೆ ವಿಷಯದಲ್ಲಿ ನಾವು ಯಾವುದೇ ರಾಜಿ ಸಂಧಾನ ಮಾಡಿಕೊಳ್ಳುವುದಿಲ್ಲ. ಅಗತ್ಯಬಿದ್ದರೆ ಗಡಿಯನ್ನು ದಾಟಿ ಉಗ್ರರ ಹುಟ್ಟಡಗಿಸಲು ನಮ್ಮ ಯೋಧರು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಾಲಾಕೋಟ್ ಸೇರಿದಂತೆ ವಿವಿಧೆಡೆ ಜೈಷ್-ಎ- ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಅಡಗುತಾಣಗಳು ಮತ್ತು ತರಬೇತಿ ಶಿಬಿರಗಳ ಮೇಲೆ ಭಾರತೀಯ ಯುದ್ಧವಿಮಾನಗಳು ಇದೇ ದಿನ ಅಂದರೆ ಫೆ.26ರಂದು ಮಿಂಚಿನ ದಾಳಿ ನಡೆಸಿದವು. ಈ ಮಹತ್ವದ ಕಾರ್ಯಾಚರಣೆಯಲ್ಲಿ ಉಗ್ರಗಾಮಿಗಳ ಶಿಬಿರಗಳು, ಶಸ್ತ್ರಾಸ್ತ್ರ ದಾಸ್ತಾನು ಸಂಗ್ರಹಗಳು ನುಚ್ಚುನೂರಾಗಿ ಹತ್ತಾರು ಉಗ್ರರು ಹತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


