ದೇಶ

ಕಠಿಣ ಕ್ರಮ ಕೈಗೊಳ್ಳಲಾಗದಿದ್ದರೆ ರಾಜೀನಾಮೆ ನೀಡಿ: ಕೇಂದ್ರ ಸರ್ಕಾರಕ್ಕೆ ರಜನಿಕಾಂತ್ ತರಾಟೆ 

ಈಶಾನ್ಯ ದೆಹಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಗಲಭೆ ಸ್ವರೂಪ ಪಡೆದು 24 ಜನರು ಬಲಿಯಾಗಿರುವ ವಿಷಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಠಿಣ ಕ್ರಮ ಕೈಗೊಳ್ಳಲಾಗದಿದ್ದರೆ ರಾಜೀನಾಮೆ ನೀಡಿ: ಕೇಂದ್ರ ಸರ್ಕಾರಕ್ಕೆ ರಜನಿಕಾಂತ್ ತರಾಟೆ 
ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಕೇಂದ್ರ ಸರ್ಕಾರಕ್ಕೆ ರಜನಿಕಾಂತ್ ತರಾಟೆ
Published On :

ಚೆನ್ನೈ: ಈಶಾನ್ಯ ದೆಹಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಗಲಭೆ ಸ್ವರೂಪ ಪಡೆದು 24 ಜನರು ಬಲಿಯಾಗಿರುವ ವಿಷಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಗಲಭೆಗಳನ್ನು ಕಠಿಣ ಕ್ರಮಗಳಿಂದ ನಿಯಂತ್ರಿಸಬೇಕಿತ್ತು ಎಂದು ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅತ್ಯಂತ ತೀಕ್ಷ್ಣವಾಗಿ ಮಾತನಾಡಿರುವ ರಜನಿಕಾಂತ್, ಗಲಭೆಗಳನ್ನು ಕಠಿಣವಾಗಿ ಹತ್ತಿಕ್ಕಲು ಸಾಧ್ಯವಾಗದೇ ಇದ್ದಲ್ಲಿ ರಾಜೀನಾಮೆ ನೀಡಿ ಹೊರ ನಡೆಯಿರಿ ಎಂಬ ಸಲಹೆ ನೀಡಿದ್ದಾರೆ. 

ಇದು ಖಂಡಿತವಾಗಿಯೂ ಕೇಂದ್ರ ಸರ್ಕಾರದ ಗುಪ್ತಚರ ವೈಫಲ್ಯ. ಕೇಂದ್ರ ಸರ್ಕಾರವನ್ನು ಖಂಡಿಸುತ್ತೇನೆ ಎಂದು ದೆಹಲಿ ಗಲಭೆ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದಾಗ ಎಚ್ಚರಿಕೆಯಿಂದ ಇರಬೇಕಿತ್ತು. ಗೌಪ್ತಚರ ಇಲಾಖೆ ಅದರ ಕೆಲಸ ಸರಿಯಾಗಿ ನಿರ್ವಹಿಸಿಲ್ಲ. ಕಠಿಣ ಕ್ರಮಗಳಿಂದ ಹಿಂಸಾಚಾರವನ್ನು ನಿಯಂತ್ರಿಸಬೇಕಿತ್ತು. ಈಗಿಂದಲಾದರೂ ಜಾಗರೂಕರಾಗಿರುತ್ತಾರೆ ಎಂಬ ನಿರೀಕ್ಷೆ ಇದೆ, ಪ್ರಾರಂಭದಲ್ಲೇ ಇದನ್ನು ನಿಯಂತ್ರಿಸಬೇಕಾಗಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ರಜನಿಕಾಂತ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.