ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಎಫ್ಐಆರ್: ಆಪ್ ನಿಂದ ತಹಿರ್ ಹುಸೇನ್ ಅಮಾನತು
ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದ ಎಫ್ಐಆರ್ ನಲ್ಲಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್ ಹೆಸರು ಉಲ್ಲೇಖವಾಗಿದ್ದು, ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ.

ನವದೆಹಲಿ: ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದ ಎಫ್ಐಆರ್ ನಲ್ಲಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್ ಹೆಸರು ಉಲ್ಲೇಖವಾಗಿದ್ದು, ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪೊಲೀಸ್ ತನಿಖೆಯಲ್ಲಿ ತಾಹಿರ್ ಹುಸೇನ್ ನ ಮೇಲೆ ಶಂಕೆ ವ್ಯಕ್ತವಾಗಿದ್ದು ಆತನ ವಿರುದ್ಧ 302 ಐಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಇದಕ್ಕೂ ಮುನ್ನ ವಿಡಿಯೋ ಹೇಳಿಕೆ ನೀಡಿದ್ದ ಹುಸೇನ್, ತಾನು ಈ ಪ್ರಕರಣದಲ್ಲಿ ಅಮಾಯಕ, ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಗಲಭೆಯ ನಾನೂ ಸಹ ಸಂತ್ರಸ್ತನಾಗಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


